ಕೊಪ್ಪಳ: ಜಿಲ್ಲೆಯಲ್ಲಿ ಗುರುವಾರ 357 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 10 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಕೊಪ್ಪಳ ತಾಲೂಕಿನಲ್ಲಿ 194, ಗಂಗಾವತಿ ತಾಲೂಕಿನಲ್ಲಿ 90, ಕುಷ್ಟಗಿ ತಾಲೂಕಿನಲ್ಲಿ 59 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 14 ಪ್ರಕರಣ ಸೇರಿ ಗುರುವಾರ 357 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ಒಟ್ಟು 20,796 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಕೊಪ್ಪಳ ಜಿಲ್ಲೆಯಲ್ಲಿ 357 ಮಂದಿಗೆ ಕೊರೊನಾ ಗುರುವಾರ 10 ಜನ ಸೋಂಕಿತರು ಸಾವನ್ನಪ್ಪಿದ್ದು, ಈವರೆಗೆ ಒಟ್ಟು 340 ಜನ ಸೋಂಕಿತರು ಮೃತಪಟ್ಟಿದ್ದಾರೆ. 204 ಜನರು ಗುಣಮುಖರಾಗಿದ್ದು, ಈವರೆಗೆ ಒಟ್ಟು 16173 ಜನರು ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 4283 ಸಕ್ರೀಯ ಪ್ರಕರಣಗಳಿದ್ದು, 3849 ಜನ ಸೋಂಕಿತರು ಹೋಂ ಐಸೋಲೇಷನ್ನಲ್ಲಿದ್ದಾರೆ. 434 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.