ಕರ್ನಾಟಕ

karnataka

ETV Bharat / state

ಕೊಪ್ಪಳದಲ್ಲಿ ಸೋಂಕಿಗೆ ಇಂದು ಇಬ್ಬರು ಬಲಿ: ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ - Koppal corona news

ಕೊಪ್ಪಳದಲ್ಲಿ ಕೊರೊನಾದಿಂದ ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಗ್ರಾಮದ 51 ವರ್ಷದ ಪುರುಷ ಮತ್ತು ಕೊಪ್ಪಳ ತಾಲೂಕಿನ ಮುನಿರಾಬಾದ್ ಗ್ರಾಮದ 65 ವರ್ಷದ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ.

ಕೊಪ್ಪಳ ಜಿಲ್ಲಾಡಳಿತ ಭವನ
ಕೊಪ್ಪಳ ಜಿಲ್ಲಾಡಳಿತ ಭವನ

By

Published : Jul 9, 2020, 8:20 PM IST

ಕೊಪ್ಪಳ: ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿಂದು ಇಬ್ಬರು ಬಲಿಯಾಗಿದ್ದು, ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ, 51 ವರ್ಷದ ಪುರುಷ ಹಾಗೂ 65 ವರ್ಷದ ವ್ಯಕ್ತಿ ಇಂದು ಸಾವನ್ನಪ್ಪಿದ್ದಾರೆ.

ಕೊಪ್ಪಳದಲ್ಲಿ ಸೋಂಕಿಗೆ ಇಂದು ಇಬ್ಬರು ಬಲಿ

ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಗ್ರಾಮದ 51 ವರ್ಷದ ಪುರುಷ (P-24910)ಜುಲೈ. 5 ರಂದು ಸೋಂಕು ದೃಢಪಟ್ಟ ಹಿನ್ನೆಲೆ ಕೋವಿಡ್ -19 ಆಸ್ಪತ್ರೆಗೆ ದಾಖಲಾಗಿದ್ದರು. ಸೋಂಕಿತ ವ್ಯಕ್ತಿ ಹೃದಯ ಸಂಬಂಧಿ ಖಾಯಿಲೆಯಿಂದಲೂ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕೊಪ್ಪಳದಲ್ಲಿ ಸೋಂಕಿಗೆ ಇಂದು ಇಬ್ಬರು ಬಲಿ

ಇನ್ನು ಕೊಪ್ಪಳ ತಾಲೂಕಿನ ಮುನಿರಾಬಾದ್ ಗ್ರಾಮದ 65 ವರ್ಷದ ಸೋಂಕಿತ ವ್ಯಕ್ತಿ (P-28568) ಸಂಜೆ ಮೃತಪಟ್ಟಿದ್ದಾನೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ, ಈ ವ್ಯಕ್ತಿ ಜುಲೈ 7 ರಂದು ಕೋವಿಡ್ -19 ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಜಿಲ್ಲೆಯಲ್ಲಿ ಇಂದು ಯಾವುದೇ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ. ಆದರೆ, ಸೋಂಕಿತರ ಸಾವಿನ ಸಂಖ್ಯೆ ನಾಲ್ಕಕ್ಕೇರಿದೆ.

ABOUT THE AUTHOR

...view details