ಕೊಪ್ಪಳ ಜಿಲ್ಲಾ ಪಂಚಾಯತ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಒಟ್ಟು 13 ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಹೊರ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಈ ನೇಮಕಾತಿ, ಭರ್ತಿ, ವೇತನ ಸೇರಿದಂತೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆ ವಿವರ: ಕೊಪ್ಪಳ ಜಿಲ್ಲಾ ಪಂಚಾಯತ್ನಲ್ಲಿ ತಾಂತ್ರಿಕ ಸಹಾಯಕರು (ಕೃಷಿ) 5, ತಾಂತ್ರಿಕ ಸಹಾಯಕರು (ಅರಣ್ಯ) 7, ತಾಂತ್ರಿಕ ಸಹಾಯಕರು (ರೇಷ್ಮೆ) 1 ಒಟ್ಟು 13 ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
ವಿದ್ಯಾರ್ಹತೆ: ತಾಂತ್ರಿಕ ಸಹಾಯಕರು (ಕೃಷಿ): ಅಭ್ಯರ್ಥಿಗಳು ಕೃಷಿ ವಿಷಯದಲ್ಲಿ ಪದವಿಯನ್ನು ಹೊಂದಿರುವ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು
ತಾಂತ್ರಿಕ ಸಹಾಯಕರು (ಅರಣ್ಯ): ಈ ಹುದ್ದೆಗೆ ಅಭ್ಯರ್ಥಿಗಳು ಅರಣ್ಯಶಾಸ್ತ್ರದಲ್ಲಿ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು
ತಾಂತ್ರಿಕ ಸಹಾಯಕರು (ರೇಷ್ಮೆ): ಈ ಹುದ್ದೆಗೆ ಅಭ್ಯರ್ಥಿಗಳು ರೇಷ್ಮೆ ವಿಷಯದಲ್ಲಿ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಹುದ್ದೆ ಅನುಭವ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈಗಾಗಲೇ ಸಂಬಂಧಿಸಿದ ಕ್ಷೇತ್ರದಲ್ಲಿ ಮೂರು ವರ್ಷದ ಕೆಲಸದ ಅನುಭವವನ್ನು ಹೊಂದಿರಬೇಕು.
ವೇತನ: ಈ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಮಾಸಿಕ 24 ಸಾವಿರ ವೇತನ ಜೊತೆಗೆ 2000 ರೂ ಪ್ರಯಾಣ ಭತ್ಯೆಗಳನ್ನು ನೀಡಲಾಗುವುದು.