ಕೊಪ್ಪಳ: ಕಾಮದಹನ, ಹೋಳಿ ಆಚರಣೆ ಹಿನ್ನೆಲೆ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಆದೇಶ ಹೊರಡಿಸಿದ್ದಾರೆ.
ಕಾಮದಹನ, ಹೋಳಿ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ಮದ್ಯ ಮಾರಾಟ ನಿಷೇಧಿಸಲಾಗಿದೆ. ಕೊಪ್ಪಳ ನಗರದಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದಲೇ ಮದ್ಯದಂಗಡಿಗಳು ಬಂದ್ ಆಗಿವೆ.
ಕೊಪ್ಪಳ ತಾಲೂಕು ಹಾಗೂ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 29 ಬೆಳಗ್ಗೆ 6 ಗಂಟೆಯವರೆಗೂ ಹಾಗೂ ಜಿಲ್ಲೆಯ ಗಂಗಾವತಿ, ಕಾರಟಗಿ, ಯಲಬುರ್ಗಾ, ಕುಕನೂರು, ಕನಕಗಿರಿ ಹಾಗೂ ಕುಷ್ಟಗಿ ತಾಲೂಕಿನಲ್ಲಿ ಮಾರ್ಚ್ 28 ರ ಸಂಜೆ 6 ಗಂಟೆಯಿಂದ ಮಾರ್ಚ್ 29 ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯಮಾರಾಟ ನಿಷೇಧಿಸಿ ಆದೇಶ ಮಾಡಿರುವುದಾಗಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ತಮ್ಮ ಪರಷ್ಕೃತ ಆದೇಶದಲ್ಲಿ ತಿಳಿಸಿದ್ದಾರೆ.
ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಇದನ್ನೂ ಓದಿ:ಹೊಲದಲ್ಲಿ ಮಲಗಿದ್ದ ಯುವಕನನ್ನು ಕೊಡಲಿಯಿಂದ ಕೊಚ್ಚಿ ಕೊಂದು ಹಾಕಿದ ದುಷ್ಕರ್ಮಿಗಳು!