ಕೊಪ್ಪಳ: ಫೆ. 20 ರಂದು ಯಲಬುರ್ಗಾ ತಾಲೂಕಿನ ವಡ್ರಕಲ್ ಗ್ರಾಮದಲ್ಲಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಗ್ರಾಮ ವಾಸ್ತವ್ಯ ಹೂಡಲು ನಿರ್ಧರಿಸಿದ್ದಾರೆ.
ಫೆ.20 ರಂದು ಗ್ರಾಮ ವಾಸ್ತವ್ಯ ಹೂಡಲಿರುವ ಕೊಪ್ಪಳ ಜಿಲ್ಲಾಧಿಕಾರಿ - Vikas suralkal Kishore Koppal District Collector
ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಅವರು ಫೆ. 20 ರಂದು ಗ್ರಾಮ ವಾಸ್ತವ್ಯ ಮಾಡಲು ನಿರ್ಧರಿಸಿದ್ದಾರೆ.
![ಫೆ.20 ರಂದು ಗ್ರಾಮ ವಾಸ್ತವ್ಯ ಹೂಡಲಿರುವ ಕೊಪ್ಪಳ ಜಿಲ್ಲಾಧಿಕಾರಿ ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್](https://etvbharatimages.akamaized.net/etvbharat/prod-images/768-512-10661146-thumbnail-3x2-lek.jpg)
ಈ ಕುರಿತಂತೆ 'ಈಟಿವಿ ಭಾರತ'ದೊಂದಿಗೆ ಮಾತನಾಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಕಂದಾಯ ಇಲಾಖೆಗೆ ಸಂಬಂಧಿಸಿದ ಪಹಣಿ ಪತ್ರ ಸಮಸ್ಯೆ, ಸಂಧ್ಯಾ ಸುರಕ್ಷಾ, ವಿಧವಾ, ವೃದ್ಧಾಪ್ಯ ವೇತನ ಸೇರಿದಂತೆ ಮುಖ್ಯವಾಗಿ ಕಂದಾಯ ಇಲಾಖೆಯ ಯೋಜನೆಗಳ ಬಗ್ಗೆ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗುತ್ತದೆ. ಇದರ ಜೊತೆಗೆ ವಿವಿಧ ಇಲಾಖೆಗಳ ಯೋಜನೆಗಳ ಕುರಿತು ಮಾಹಿತಿ ನೀಡಲಾಗುತ್ತದೆ ಎಂದರು.
ಇನ್ನು ನನ್ನ ಜೊತೆಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಹ ಭಾಗವಹಿಸಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿ, ಅವರ ಸಮಸ್ಯೆಗಳನ್ನು ಇತ್ಯರ್ಥಪಡಿಸಲಿದ್ದಾರೆ. ಜಿಲ್ಲಾಡಳಿತವೇ ಅಂದು ವಡ್ರಕಲ್ ಗ್ರಾಮದಲ್ಲಿದ್ದು, ಜನರ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನ ಮಾಡಲಾಗುವುದು ಎಂದು ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.