ಕರ್ನಾಟಕ

karnataka

ETV Bharat / state

ಕೊಪ್ಪಳ ಜಿಲ್ಲೆಯಲ್ಲಿ ಇಂದು ಶತಕ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ - ಕೊಪ್ಪಳ ಜಿಲ್ಲೆ ಸುದ್ದಿ

ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 14605ಕ್ಕೇರಿದೆ. ಜಿಲ್ಲೆಯಲ್ಲಿ ಒಟ್ಟು 460 ಸಕ್ರಿಯ ಪ್ರಕರಣಗಳಿದ್ದು, 384 ಸೋಂಕಿತರು ಹೋಂ ಐಸೋಲೇಷನ್‍ನಲ್ಲಿದ್ದಾರೆ.

Corona
Corona

By

Published : Apr 15, 2021, 10:30 PM IST

ಕೊಪ್ಪಳ: ಜಿಲ್ಲೆಯಲ್ಲಿ ಇಂದು ಒಂದೇ ದಿನ ಕೊರೊನಾ ಸೋಂಕಿತರ ಸಂಖ್ಯೆ ಶತಕ ದಾಟಿದೆ. ಬರೋಬ್ಬರಿ 105 ಪಾಸಿಟವ್ ಪ್ರಕರಣಗಳು ಪತ್ತೆಯಾಗಿವೆ.

ಕೊಪ್ಪಳ ತಾಲೂಕಿನಲ್ಲಿ 15, ಗಂಗಾವತಿ ತಾಲೂಕಿನಲ್ಲಿ 71, ಕುಷ್ಟಗಿ ತಾಲೂಕಿನಲ್ಲಿ 14 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 5 ಪ್ರಕರಣ ಸೇರಿ ಜಿಲ್ಲೆಯಲ್ಲಿ ಇಂದು ಒಟ್ಟು 105 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 14605ಕ್ಕೇರಿದೆ. ಜಿಲ್ಲೆಯಲ್ಲಿ ಒಟ್ಟು 460 ಸಕ್ರಿಯ ಪ್ರಕರಣಗಳಿದ್ದು, 384 ಸೋಂಕಿತರು ಹೋಂ ಐಸೋಲೇಷನ್‍ನಲ್ಲಿದ್ದಾರೆ. ಉಳಿದಂತೆ 76 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 12 ಜನರು ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 13871 ಜನರು ಗುಣಮುಖರಾದಂತಾಗಿದೆ.

ಜಿಲ್ಲೆಯಲ್ಲಿ ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಜಿಲ್ಲೆಯ ಜನರನ್ನು ಆತಂಕಕ್ಕೀಡು ಮಾಡಿದೆ.

ABOUT THE AUTHOR

...view details