ಕೊಪ್ಪಳ: ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಗರದ ವಿವಿಧ ವಾರ್ಡ್ಗಳಲ್ಲಿನ ಜನರಿಗೆ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಆಹಾರ ಪದಾರ್ಥಗಳ ಕಿಟ್ ವಿತರಿಸಿದ್ದಾರೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನರಿಗೆ ಕಿಟ್ ವಿತರಿಸಿದ ಕೊಪ್ಪಳ ಶಾಸಕ! - without maintaining social Distance
ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೊಪ್ಪಳ ಶಾಸಕ, ಕಾರ್ಯಕರ್ತರು ಹಾಗೂ ಮುಖಂಡರು ಗುಂಪು ಗುಂಪಾಗಿ ನಿಂತು ಆಹಾರ ಧಾನ್ಯಗಳ ಕಿಟ್ ವಿತರಿಸಿದ್ದಾರೆ.
ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ಡೌನ್ ಮುಂದುವರೆದಿದ್ದು, ಹಲವು ಜನರು ಸಂಕಷ್ಟಕ್ಕೀಡಾಗಿದ್ದಾರೆ. ಇಂತಹ ಜನರಿಗೆ ಅನೇಕರು ತಮ್ಮ ನೆರವಿನ ಹಸ್ತ ಚಾಚುತ್ತಿದ್ದಾರೆ. ಹಾಗೆಯೇ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಸಹ ನಗರದಲ್ಲಿ ಅಕ್ಕಿ, ಬೇಳೆ ಸೇರಿದಂತೆ ಆಹಾರ ಪದಾರ್ಥಗಳ ಕಿಟ್ಗಳನ್ನ ನಗರದ ವಿವಿಧ ವಾರ್ಡ್ಗಳಲ್ಲಿನ ಜನರಿಗೆ ವಿತರಿಸುತ್ತಿದ್ದಾರೆ.
ಅವರ ಕೊಪ್ಪಳ ನಿವಾಸದ ಬಳಿ ಸಾಂಕೇತಿಕವಾಗಿ ಆಹಾರ ಸಾಮಗ್ರಿ ಕಿಟ್ಗಳನ್ನು ವಿತರಿಸುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ವಿಫಲರಾಗಿದ್ದು ಕಂಡುಬಂತು. ಕಾರ್ಯಕರ್ತರು ಹಾಗೂ ಮುಖಂಡರು ಗುಂಪು ಗುಂಪಾಗಿ ನಿಂತಿದ್ದರು. ಭಾಗ್ಯನಗರದಲ್ಲಿ ಸುಮಾರು 3000 ಸಾವಿರ ಕಿಟ್ಗಳನ್ನು ವಿತರಿಸುತ್ತಿರುವುದಾಗಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ತಿಳಿಸಿದ್ದಾರೆ.