ಕೊಪ್ಪಳ:ಫೂಲಿಷ್ (foolish) ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳರನ್ನು ಯಾವುದೇ ಸೂಚನೆ ಕೊಡದೆ ಪಕ್ಷದಿಂದ ಹೊರಹಾಕುವಂತೆ ಪಕ್ಷದ ಅಧ್ಯಕ್ಷರಿಗೆ ಮನವಿ ಮಾಡುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಸಚಿವರು, ಕೆಲವರಿಗೆ ಬಾಯಿ ಚಪಲ. ಬಸವನಗೌಡ ಪಾಟೀಲ್ ಯತ್ನಾಳ್ ಉತ್ತರನ ಪೌರುಷದಂತೆ ಮಾತನಾಡಿ ಫೂಲಿಷ್ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ನೋಟಿಸ್ ಕೊಡುವ ಅವಶ್ಯಕತೆ ಇಲ್ಲ. ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಯತ್ನಾಳ್ರನ್ನು ಪಕ್ಷದಿಂದ ಹೊರ ಹಾಕುವಂತೆ ನಾನು ಪಕ್ಷದ ಅಧ್ಯಕ್ಷರಿಗೆ ಮನವಿ ಮಾಡುತ್ತೇನೆ ಎಂದರು.