ಕರ್ನಾಟಕ

karnataka

ETV Bharat / state

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಐದಕ್ಕೂ ಹೆಚ್ಚು ಮಂದಿಗೆ ಗಾಯ - ಯಲಬುರ್ಗಾ ತಾಲೂಕಿನ ಹೊಸಳ್ಳಿ ಬಳಿ ಬಸ್ ಪಲ್ಟಿ

ಗಜೇಂದ್ರಗಡದಿಂದ ಕೊಪ್ಪಳ‌ಕ್ಕೆ ಬರುತ್ತಿದ್ದ ಬಸ್ ಹೊಸಳ್ಳಿ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಹೊಲದಲ್ಲಿ ಉರುಳಿ ಬಿದ್ದಿದೆ.

ksrtc bus overturn in koppal
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ

By

Published : Jun 19, 2020, 3:34 PM IST

ಕೊಪ್ಪಳ:ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾಗಿ ಐದಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಯಲಬುರ್ಗಾ ತಾಲೂಕಿನ ಹೊಸಳ್ಳಿ ಗ್ರಾಮದ ಬಳಿ ನಡೆದಿದೆ‌.

ಗಜೇಂದ್ರಗಡದಿಂದ ಕೊಪ್ಪಳ‌ಕ್ಕೆ ಬರುತ್ತಿದ್ದ ಬಸ್ ಹೊಸಳ್ಳಿ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಹೊಲದಲ್ಲಿ ಉರುಳಿ ಬಿದ್ದಿದೆ. ಪರಿಣಾಮವಾಗಿ ಬಸ್​​​​ನಲ್ಲಿದ್ದ ಐದಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ.

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ

ಗಾಯಾಳುಗಳನ್ನು ಯಲಬುರ್ಗಾ ಪಟ್ಟಣದ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ಯಲಬುರ್ಗಾ ಠಾಣೆಯ ‌ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ABOUT THE AUTHOR

...view details