ಕುಷ್ಟಗಿ: ಪ್ರಸಕ್ತ ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಹಾಗೂ ಮತ ಎಣಿಕೆಗೆ ಮಾತ್ರ ಪ್ರೌಢಶಾಲಾ ಶಿಕ್ಷಕರನ್ನು ನೇಮಿಸುವಂತೆ ಕುಷ್ಟಗಿ ತಾಲೂಕಿನ ಪ್ರೌಢಶಾಲಾ ಶಿಕ್ಷಕರು ಗ್ರೇಡ್ 2 ತಹಶೀಲ್ದಾರ ಹೆಚ್. ವಿಜಯಾ ಮುಂಡರಗಿ ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಗ್ರಾ.ಪಂ. ಚುನಾವಣೆ ದೀರ್ಘಾವಧಿ ಕರ್ತವ್ಯದಿಂದ ಬಿಡುಗಡೆಗೊಳಿಸಿ: ಪ್ರೌಢಶಾಲಾ ಶಿಕ್ಷಕರ ಮನವಿ - appeal to DC
ರಾಜ್ಯ ಚುನಾವಣಾ ಆಯೋಗದ ಆದೇಶದ ಹೊರತಾಗಿಯೂ ಪ್ರೌಢಶಾಲಾ ಶಿಕ್ಷಕರನ್ನು ದೀರ್ಘಾವಧಿ ಚುನಾವಣಾ ಕರ್ತವ್ಯಕ್ಕೆ ನೇಮಿಸಿದ್ದು, ಇದನ್ನು ಪುನರ್ ಪರಿಶೀಲಿಸುವಂತೆ ಕುಷ್ಟಗಿ ತಾಲೂಕಿನ ಪ್ರೌಢಶಾಲಾ ಶಿಕ್ಷಕರು ಗ್ರೇಡ್ 2 ತಹಶೀಲ್ದಾರ ಹೆಚ್. ವಿಜಯಾ ಮುಂಡರಗಿ ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಪ್ರೌಢಶಾಲಾ ಶಿಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ
ಈಗಾಗಲೇ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ಚುನಾವಣಾ ಕರ್ತವ್ಯಕ್ಕೆ ನೇಮಿಸಿದೆ. ಸದ್ಯದ ಪರಿಸ್ಥಿತಿಯಲ್ಲಿ ಶಿಕ್ಷಕರು ವಿದ್ಯಾಗಮ ಕಾರ್ಯಕ್ರಮದ ನಿರಂತರ ಕಲಿಕಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ವೇಳೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದರೆ ಮಕ್ಕಳ ಶಿಕ್ಷಣಕ್ಕೆ ಅನಾನುಕೂಲವಾಗುವ ಸಾಧ್ಯತೆಯಿದೆ.
ರಾಜ್ಯ ಚುನಾವಣಾ ಆಯೋಗದ ಆದೇಶದ ಹೊರತಾಗಿಯೂ ದೀರ್ಘಾವಧಿ ಚುನಾವಣಾ ಕರ್ತವ್ಯಕ್ಕೆ ನೇಮಿಸಿದ್ದು, ಇದನ್ನು ಪುನರ್ ಪರಿಶೀಲಿಸುವಂತೆ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ ಕಾಡಗಿಮಠ ತಿಳಿಸಿದ್ದಾರೆ.