ಕುಷ್ಟಗಿ(ಕೊಪ್ಪಳ): ಕುಷ್ಟಗಿಯಿಂದ ಗಜೇಂದ್ರಗಡ ಮಾರ್ಗದ ರಾಜ್ಯ ಹೆದ್ದಾರಿಯಲ್ಲಿದ್ದ ಗುಂಡಿಗಳನ್ನು ಮುಚ್ಚಿಸಲು ಲೋಕೋಪಯೋಗಿ ಇಲಾಖೆ ಬೇಜವಾಬ್ದಾರಿ ತೋರಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಕಳಪೆ ಕಾಮಗಾರಿ: ಲೋಕೋಪಯೋಗಿ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ - ಕುಷ್ಟಗಿಯಿಂದ ಗಜೇಂದ್ರಗಡ ಮಾರ್ಗದ ರಾಜ್ಯ ಹೆದ್ದಾರಿ ಕಾಮಗಾರಿ
ಹೆದ್ದಾರಿಯಲ್ಲಿದ್ದ ಗುಂಡಿಗಳನ್ನು ಮುಚ್ಚಿಸಲು ಲೋಕೋಪಯೋಗಿ ಇಲಾಖೆ ಕಾಟಾಚಾರದ ಕ್ರಮ ಕೈಗೊಂಡಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
![ಕಳಪೆ ಕಾಮಗಾರಿ: ಲೋಕೋಪಯೋಗಿ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ Kustagi](https://etvbharatimages.akamaized.net/etvbharat/prod-images/768-512-10:10:43:1596602443-kn-kst-05-04-hadagetta-road-kac10028-04082020204224-0408f-1596553944-685.jpg)
Kustagi
ರಾಜ್ಯ ಹೆದ್ದಾರಿಯಲ್ಲಿದ್ದ ಗುಂಡಿಗಳನ್ನು ಕಾಟಾಚಾರಕ್ಕೆ ಜಲ್ಲಿಕಲ್ಲು ಹಾಕಿ ಮುಚ್ಚಿಸಲು ಯತ್ನಿಸಿದ್ದಾರೆ. ಇದರಿಂದ ಯಾವುದೇ ಪ್ರಯೋಜನ ಇಲ್ಲದಂತಾಗಿದೆ. ಪುನಃ ಹೆದ್ದಾರಿ ಗುಂಡಿಯಲ್ಲಿ ನೀರು ತುಂಬಿಕೊಂಡಿದೆ. ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.