ಕರ್ನಾಟಕ

karnataka

ETV Bharat / state

ಕೊಪ್ಪಳದಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತ್ಯೇಕ ಪ್ರತಿಭಟನೆ - Koppal news

ಒಂದು ಕಡೆ ದೇಶದಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದೆ. ಮತ್ತೊಂದೆಡೆ ದೇಶದ ಆರ್ಥಿಕತೆ ಕುಸಿಯುತ್ತಾ ಸಾಗಿದೆ. ಪರಿಣಾಮವಾಗಿ ದುಡಿಯುವ ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಜನರನ್ನು ಸಂರಕ್ಷಿಸಬೇಕಾದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಚೆಲ್ಲಿ ಕುಳಿತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

Koppal
ಕೊಪ್ಪಳದಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತ್ಯೇಕವಾಗಿ ಪ್ರತಿಭಟನೆ

By

Published : Jul 3, 2020, 5:48 PM IST

ಕೊಪ್ಪಳ: ಕೇಂದ್ರ ಕಾರ್ಮಿಕ ಸಂಘಟನೆಗಳು ದೇಶವ್ಯಾಪಿ ಕರೆ ನೀಡಿದ್ದ ಮುಷ್ಕರ ಬೆಂಬಲಿಸಿ ಕೊಪ್ಪಳದಲ್ಲಿ ಇಂದು ಕಾರ್ಮಿಕ ಸಂಘಟನೆಗಳು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದವು.

ಕೊಪ್ಪಳದಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತ್ಯೇಕವಾಗಿ ಪ್ರತಿಭಟನೆ

ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಕಾರ್ಯಕರ್ತರು ನಗರದ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದರೆ, ಇತ್ತ ಸಿಐಟಿಯು (ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್) ಕಾರ್ಯಕರ್ತರು ನಗರದ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರ ಪ್ರಕಟಿಸಿದ 20 ಲಕ್ಷ ಕೋಟಿ ರೂ ಪರಿಹಾರ ಪ್ಯಾಕೇಜ್ ಹಿಂದಿನ ಬಜೆಟ್‌ನ ಘೋಷಣೆ ಹೊರತು ಬೇರೇನೂ ಅಲ್ಲ. ಪ್ರಪಂಚದ ಬೇರೆ ಬೇರೆ ದೇಶದ ಸರ್ಕಾರಗಳು ಕಾರ್ಮಿಕರಿಗೆ ವೇತನ ಪ್ಯಾಕೇಜ್ ನೀಡಿವೆ. ಆದರೆ ನಮ್ಮ ದೇಶದ ಕೇಂದ್ರ ಸರ್ಕಾರ ಕೋವಿಡ್-19 ಲಾಕ್​ಡೌನ್ ಸನ್ನಿವೇಶ ಬಳಸಿಕೊಂಡು ಸಾರ್ವಜನಿಕ ಉದ್ಯಮಗಳಲ್ಲಿನ ಹೂಡಿಕೆಗಳನ್ನು ಹಿಂತೆಗೆದುಕೊಳ್ಳುವ ಮತ್ತು ಖಾಸಗೀಕರಣಗೊಳಿಸಲು ಮುಂದಾಗಿದೆ.

ಕಾರ್ಮಿಕ ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವ ಮೂಲಕ ಕಾರ್ಮಿಕರ ಮೇಲೆ ಗುಲಾಮಗಿರಿ ಹೇರಲು ಹೊರಟಿದೆ. ಆತ್ಮನಿರ್ಭರ ಭಾರತ ಘೋಷಣೆ ನೀಡಿ ಸಮಾಜ ಮತ್ತು ಸರ್ಕಾರದ ಮೇಲೆ ಜನರು ಅವಲಂಬಿತವಾಗಬಾರದು ಎಂದು ಸರ್ಕಾರ ಹೇಳುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶಪಡಿಸಿದರು.

ಆಶಾ, ಅಂಗನವಾಡಿ, 108 ಆಂಬುಲೆನ್ಸ್ ಉದ್ಯೋಗಿಗಳು, ಪೌರಕಾರ್ಮಿಕರು, ದಾದಿಯರು, ಪೊಲೀಸರು ಹಾಗೂ ವೈದ್ಯರೂ ಸೇರಿ ಕೊರೊನಾ ಮುಂಚೂಣಿ ಕೆಲಸದಲ್ಲಿರುವ ವಾರಿಯರ್ಸ್‌ಗಳ ಸುರಕ್ಷತಾ ಬೇಡಿಕೆಗಳನ್ನು ಸರ್ಕಾರ ಇವರಿಗೆ ಪೂರೈಸಿಲ್ಲ ಹಾಗೂ ಅವರಿಗೆ ಯಾವುದೇ ಪ್ರೋತ್ಸಾಹಧನ ನೀಡಿಲ್ಲ ಎಂದು ಆಪಾದಿಸಿದರು.

ಕೊರೊನಾ ಮುಂಚೂಣಿ ಕೆಲಸದಲ್ಲಿರುವ ಕೊರೊನಾ ವಾರಿಯರ್ಸ್​ಗಳನ್ನು ಕಾಯಂಗೊಳಿಸಬೇಕು, ಆದಾಯ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಜನರಿಗೆ ಆರು ತಿಂಗಳು ಮಾಸಿಕವಾಗಿ 7500 ರುಪಾಯಿಗಳನ್ನು ನೇರ ನಗದು ವರ್ಗಾವಣೆ ಮಾಡಬೇಕು. ಯೋಜನಾ ನೌಕರರಿಗೆ ಕೊರೊನಾ ಕೆಲಸದ ಪ್ರೋತ್ಸಾಹ ನೀಡಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಸಲ್ಲಿಸಿದ ಮನವಿಯಲ್ಲಿ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ABOUT THE AUTHOR

...view details