ಕೊಪ್ಪಳ: ಜಿಲ್ಲೆಯ ಕೆಲ ಗ್ರಾಮಗಳಿಗೆ ಸರಿಯಾದ ಸಾರಿಗೆ ವ್ಯವಸ್ಥೆಯೇ ಇಲ್ಲ. ಪರಿಣಾಮ ವಿದ್ಯಾರ್ಥಿಗಳು ಬಸ್ ಬಾಗಿಲಲ್ಲಿ ಜೋತುಬಿದ್ದು ಪ್ರಯಾಣಿಸಬೇಕಾದ ಪರಿಸ್ಥಿತಿ ಉಂಟಾಗಿದೆ.
ಜಿಲ್ಲೆಯ ನಾನಾ ಗ್ರಾಮಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲ. ಬಹುತೇಕ ಗ್ರಾಮಗಳಿಂದ ದಿನಾಲೂ ನೂರಾರು ಮಂದಿ ವಿದ್ಯಾರ್ಥಿಗಳು ನಗರ, ಪಟ್ಟಣ ಹಾಗೂ ಹೋಬಳಿ ಮಟ್ಟದ ಶಾಲಾ, ಕಾಲೇಜುಗಳಿಗೆ ಬರಲು ಈ ಸಾರಿಗೆ ಬಸ್‌ಗಳನ್ನೇ ಅವಲಂಬಿಸಿದ್ದಾರೆ. ಹೀಗಾಗಿ, ನಾನಾ ಗ್ರಾಮಗಳಿಗೆ ಆಗೊಮ್ಮೆ, ಈಗೊಮ್ಮೆ ಬಸ್ ಸಂಚಾರ ಮಾಡುತ್ತಿರುವುದರಿಂದಲೇ ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಗೆ ಹೋಗಿ ಬರಲು ಹರಸಾಹಸ ಪಡುತ್ತಿರುವುದು ಕಂಡುಬಂದಿದೆ.