ಕೊಪ್ಪಳ: ಬಾಕಿ ಹಣ ನೀಡುವಂತೆ ಒತ್ತಾಯಿಸಿ ಮಹಿಳೆಯರು ಪಂಚಾಯತ್ರಾಜ್ ಇಲಾಖೆಯ ಅಧಿಕಾರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ಗಂಗಾವತಿಯಲ್ಲಿ ನಡೆದಿದೆ.
ಬಾಕಿ ಹಣ ನೀಡಲು ಒತ್ತಾಯಿಸಿ ಪಂಚಾಯತ್ರಾಜ್ ಇಲಾಖೆ ಅಧಿಕಾರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ.. - Ladies Protests in gangavathi
ಬಾಕಿ ಹಣ ನೀಡುವಂತೆ ಒತ್ತಾಯಿಸಿ ಮಹಿಳೆಯರು ಪಂಚಾಯತ್ರಾಜ್ ಇಲಾಖೆಯ ಅಧಿಕಾರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ಗಂಗಾವತಿಯಲ್ಲಿ ನಡೆದಿದೆ.
ಬಾಕಿ ಹಣ ನೀಡುವಂತೆ ಒತ್ತಾಯಿಸಿ, ಪಂಚಾಯತ್ರಾಜ್ ಇಲಾಖೆಯ ಅಧಿಕಾರಿಗಳನ್ನ ಮುತ್ತಿಗೆ ಹಾಕಿ ಪ್ರತಿಭಟನೆ
ಯಾವುದೇ ಕಾರಣಕ್ಕೂ ಹಣ ನೀಡದೇ ಜಾಗ ಖಾಲಿ ಮಾಡುವುದಿಲ್ಲ ಎಂದು ಮಹಿಳೆಯರು ಪಟ್ಟು ಹಿಡಿದಿದ್ದು ಸ್ಥಳಕ್ಕಾಗಮಿಸಿದ ಶಾಸಕ ಪರಣ್ಣ ಮುನವಳ್ಳಿ, ಪ್ರತಿಭಟನೆ ನಿರತ ಮಹಿಳೆಯರ ಸಮ್ಮುಖದಲ್ಲಿಯೇ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು. ದುಡಿದ ಹಣ ಕೇಳುವುದರಲ್ಲಿ ತಪ್ಪಿಲ್ಲ. ಕೂಡಲೇ ಅವರಿಗೆ ಹಣ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಳೆದ ನಾಲ್ಕು ತಿಂಗಳಿಂದ ವೇತನ ಪಾವತಿ ಮಾಡಿಲ್ಲ. ಹೊಸದಾಗಿ ಕೆಲಸವೂ ನೀಡಿಲ್ಲ. ಹೀಗಾಗಿ ನಮಗೆ ಸಮಸ್ಯೆಯಾಗಿದೆ ಎಂದು ಧರಣಿ ನಿರತ ಮಹಿಳೆಯರು ಆಕ್ರೋಶ ಹೊರ ಹಾಕಿದರು. ಕೊನೆಗೆ ಶಾಸಕರ ಸಂಧಾನಕ್ಕೆ ಒಪ್ಪಿ ಮಹಿಳೆಯರು ಪ್ರತಿಭಟನೆ ಕೈಬಿಟ್ಟರು.