ಗಂಗಾವತಿ :ಕನಕಗಿರಿ ತಾಲೂಕಿನ ಅಡವಿಭಾವಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ ಮೇರೆಗೆ ಕರಡಿಗುಡ್ಡದಲ್ಲಿ ಇರಿಸಿಲಾಗಿದ್ದ ಬೋನ್‌ನ ಸ್ಥಳಾಂತರಿಸಿ ಅಡವಿಭಾವಿಯಲ್ಲಿ ಇರಿಸಲಾಗಿದೆ ಎಂದು ಆರ್‌ಎಫ್ಒ ಶಿವರಾಜ ಮೇಟಿ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಬೆಟ್ಟದಲ್ಲಿ ಮೂರು ಮರಿ ಇವೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ, ಆ ಬಗ್ಗೆ ಖಚಿತಪಡಿಸಿಕೊಳ್ಳಲು ಯಾವುದೇ ಆಧಾರ ಸಿಗುತ್ತಿಲ್ಲ. ಒಂದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಚಿರತೆ ಇರುವ ಸಾಧ್ಯತೆ ತೀರಾ ಕಡಿಮೆ.