ಗಂಗಾವತಿ:ತಾಲೂಕಿನ ಆನೆಗೊಂದಿ ಗ್ರಾಮದ ತಳವಾರಘಟ್ಟ ಬೈಪಾಸ್ ರಸ್ತೆಯಲ್ಲಿರುವ ಶಾಲೆಯೊಂದರ ಬಳಿಯಿರುವ ಬೆಟ್ಟದ ತುದಿಯಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರನ್ನು ಆತಂಕಕ್ಕೆ ತಳ್ಳಿದೆ.
ಆನೆಗೊಂದಿ ಬೆಟ್ಟದ ತುದಿಯಲ್ಲಿ ಚಿರತೆ ಪ್ರತ್ಯಕ್ಷ ಕಳೆದ ಎರಡು ತಿಂಗಳಿಂದ ಗಂಗಾವತಿ ತಾಲೂಕಿನಲ್ಲಿ ಚಿರತೆ ಹಾವಳಿ ಇರಲಿಲ್ಲ. ಇದೀಗ ಆನೆಗೊಂದಿ ಗ್ರಾಮದ ತಳವಾರಘಟ್ಟ ಬೈಪಾಸ್ ರಸ್ತೆಯಲ್ಲಿರುವ ಶಾಲೆಯೊಂದರ ಬಳಿಯಿರುವ ಬೆಟ್ಟದ ತುದಿಯಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ. ಚಿರತೆ ಓಡಾಡುತ್ತಿರುವ ದೃಶ್ಯವನ್ನು ಯುವಕರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.
ಸಮೀಪದಲ್ಲಿಯೇ ರೈತರು ಭತ್ತ ಕಟಾವು ಮಾಡಿ ರಾಶಿ ಮಾಡಿದ್ದು, ಒಣಗಲು ಹಾಕಿದ್ದಾರೆ. ಕಳೆದ ಎರಡು ಮೂರು ತಿಂಗಳ ಹಿಂದೆ ಆನೆಗೊಂದಿ ಸುತ್ತಮುತ್ತಲಿನ ಪರಿಸರದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿತ್ತು. ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಎರಡು ಚಿರತೆಗಳು ಸೆರೆಯಾದ ಬಳಿಕ, ಚಿರತೆ ಹಾವಳಿ ಕೊಂಚ ಮಟ್ಟಿಗೆ ತಗ್ಗಿತ್ತು. ಇದೀಗ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ:ಲಾಕ್ಡೌನ್ ಭಯ : ಬೆಂಗಳೂರು ತೊರೆಯುತ್ತಿರುವ ವಲಸೆ ಕಾರ್ಮಿಕರು