ಕರ್ನಾಟಕ

karnataka

ETV Bharat / state

ಅಂಜನಾದ್ರಿ ಬೆಟ್ಟದಲ್ಲಿ ಪ್ರತ್ಯಕ್ಷವಾದ ಚಿರತೆ: ಭಕ್ತರಲ್ಲಿ ಆತಂಕವೋ ಆತಂಕ! - ಚಿರತೆ ಪ್ರತ್ಯಕ್ಷ

ಗಂಗಾವತಿ ತಾಲೂಕಿನ ಆನೆಗೊಂದಿ ಸಮೀಪದ ಅಂಜನಾದ್ರಿ ಬೆಟ್ಟದಲ್ಲಿ ನಡುರಾತ್ರಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ದೇವಾಲಯದ ಕಂದಾಯ ಇಲಾಖೆಯ ಅಧಿಕಾರಿಗಳು ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾರೆ.

Leopard found in anjanadri hill

By

Published : Oct 11, 2019, 2:10 PM IST

ಗಂಗಾವತಿ :ತಾಲೂಕಿನ ಐತಿಹಾಸಿಕ ಹಾಗೂ ಧಾರ್ಮಿಕ ತಾಣವಾದ ಆನೆಗೊಂದಿ ಸಮೀಪದ ಅಂಜನಾದ್ರಿ ಬೆಟ್ಟದಲ್ಲಿ ನಡುರಾತ್ರಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಈ ಬಗ್ಗೆ ದೇಗುಲಕ್ಕೆ ಭೇಟಿ ನೀಡುವ ಭಕ್ತರಲ್ಲಿ ನಡುಕ ಹುಟ್ಟಿದೆ.

ಅಂಜನಾದ್ರಿ ಬೆಟ್ಟದಲ್ಲಿ ಪ್ರತ್ಯಕ್ಷವಾದ ಚಿರತೆ

ದೇವಸ್ಥಾನದ ಹೊರಭಾಗದಲ್ಲಿ ಅಳವಡಿಸಿರುವ ಸಿಸಿ ಕ್ಯಾಮರದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ದೃಶ್ಯಾವಳಿಗಳು ಸೆರೆಯಾಗಿದ್ದು, ಬೆಟ್ಟದ ಇಳಿಜಾರಿನಿನಿಂದ ಚಿರತೆ ಮೇಲಕ್ಕೆ ಹೋಗಿರುವ ಫುಟೇಜ್ ಲಭ್ಯವಾಗಿದೆ. ಈ ಕುರಿತು ದೇವಾಲಯದ ಕಂದಾಯ ಇಲಾಖೆಯ ಅಧಿಕಾರಿಗಳು ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾರೆ.

ಅಪಾಯ ಸಂಭವಿಸುವ ಮುನ್ನವೆ ಎಚ್ಚೆತ್ತು ಅರಣ್ಯಾಧಿಕಾರಿಗಳು ಬೋನು ಇಟ್ಟು ಚಿರತೆ ಸೆರೆಗೆ ಕ್ರಮ ಕೈಗೊಳ್ಳಬೇಕೆಂದು ಭಕ್ತರು ಒತ್ತಾಯಿಸುತ್ತಿದ್ದಾರೆ.

ABOUT THE AUTHOR

...view details