ಕುಷ್ಟಗಿ (ಕೊಪ್ಪಳ): ಲಾಕ್ಡೌನ್ ಸಡಿಲಿಕೆ ಹಿನ್ನೆಲೆ ರಾಜ್ಯದ ಹಲವು ಕಡೆಗಳಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ ಮಾಡಿಕೊಡಲಾಗಿತ್ತು. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಕುಷ್ಟಗಿಯ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆಯ ವತಿಯಿಂದ ಮದ್ಯ ಮಾರಾಟ ನಿಲ್ಲಿಸುವಂತೆ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಮದ್ಯ ಮಾರಾಟ ವಿರೋಧಿಸಿ ಸಿಎಂಗೆ ತಹಶೀಲ್ದಾರರ ಮೂಲಕ ಮನವಿ ಪತ್ರ - ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ
ಕೇಂದ್ರ ಸರ್ಕಾರದ ಆದೇಶದ ಹಿನ್ನೆಲೆ ರಾಜ್ಯದ ಹಲವೆಡೆ ಮದ್ಯದಂಗಡಿ ತೆರೆಯಲು ಅವಕಾಶ ನೀಡಲಾಗಿದ್ದು, ಮದ್ಯಪ್ರಿಯರು ಅಂಗಡಿಗಳಿಗೆ ಮುಗಿಬಿದ್ದಿದ್ದಾರೆ. ಈ ಹಿನ್ನೆಲೆ ಮದ್ಯ ಮಾರಾಟವನ್ನು ಇನ್ನಷ್ಟು ದಿನ ಮುಂದೂಡುವಂತೆ ರಾಜ್ಯದ ಅನೇಕರು ಪ್ರಸ್ತಾಪಿಸುತ್ತಿದ್ದಾರೆ. ಇದೀಗ ಕುಷ್ಟಗಿಯ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆಯ ವತಿಯಿಂದ ಮದ್ಯ ಮಾರಾಟ ನಿಲ್ಲಿಸುವಂತೆ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಮದ್ಯ ಮಾರಾಟವನ್ನು ವಿರೋಧಿಸಿ ಶ್ರೀ ಧರ್ಮಸ್ಥಳ ಧರ್ಮಾಧಿಕಾರಿಗಳು ಸೇರಿದಂತೆ ಮಠಾಧೀಶರು ಸಹ ಧ್ವನಿ ಎತ್ತಿದ್ದರು. ಸರ್ಕಾರ ಯಾವ ಪುರುಷಾರ್ಥಕ್ಕೆ ಆರಂಭಿಸಿದೆಯೋ ಗೊತ್ತಿಲ್ಲ. ಮಹನೀಯರ ವಿರೋಧ ಲೆಕ್ಕಿಸದೇ ಮದ್ಯದ ಅಂಗಡಿಗಳನ್ನು ಆರಂಭಿಸಿರುವುದು ಸೂಕ್ತವಲ್ಲ. ಮದ್ಯ ಮಾರಾಟಕ್ಕೆ ನೀಡಿದ ಅನುಮತಿಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆಯ ಜಿಲ್ಲಾ ಜನ ಜಾಗೃತಿ ವೇದಿಕೆ ಕುಷ್ಟಗಿ ಘಟಕದಿಂದ ತಹಶೀಲ್ದಾರ ಸಿದ್ದೇಶ ಎಂ. ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಅಧ್ಯಕ್ಷ ವೀರೇಶ ಬಂಗಾರಶೆಟ್ಟರ್, ಯೋಜನಾಧಿಕಾರಿ ವಿನಾಯಕ ನಾಯಕ್ ಉಪಸ್ಥಿತರಿದ್ದರು.