ಗಂಗಾವತಿ (ಕೊಪ್ಪಳ):ತಾಲ್ಲೂಕು ಪಂಚಾಯತಿ ಚುನಾವಣೆ ಸಂದರ್ಭದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯನ್ನು ಬಿಟ್ಟು, ಬಿಜೆಪಿಯನ್ನು ಬೆಂಬಲಿಸಿದ ಸದಸ್ಯರ ಮೇಲೆ ಕ್ರಮಕ್ಕೆ ಒತ್ತಾಯಿಸಿ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆಯಲಾಗಿದೆ ಎಂದು ಕಾಂಗ್ರೆಸ್ ನಗರ ಘಟಕದ ಬ್ಲಾಕ್ ಅಧ್ಯಕ್ಷ ಶಾಮೀದ ಮನಿಯಾರ ಹೇಳಿದ್ದಾರೆ.
ಗಂಗಾವತಿ: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಸದಸ್ಯರ ಮೇಲೆ ಕ್ರಮಕ್ಕೆ ಆಗ್ರಹ - koppal district gangavathi taluk
ಗಂಗಾವತಿ ಕ್ಷೇತ್ರದ ಇಬ್ಬರು ಸದಸ್ಯರು ತಾಲ್ಲೂಕು ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯನ್ನ ಬೆಂಬಲಿಸದೆ, ಬಿಜೆಪಿಯನ್ನು ಬೆಂಬಲಿಸುವ ಮೂಲಕ ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ. ಹೀಗಾಗಿ ಈ ಸದಸ್ಯರ ಮೇಲೆ ಕ್ರಮಕ್ಕೆ ಒತ್ತಾಯಿಸಿ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆಯಲಾಗಿದೆ ಎಂದು ಕಾಂಗ್ರೆಸ್ ನಗರ ಘಟಕದ ಬ್ಲಾಕ್ ಅಧ್ಯಕ್ಷ ಶಾಮೀದ ಮನಿಯಾರ ಹೇಳಿದ್ದಾರೆ.
ಗಂಗಾವತಿ: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಸದಸ್ಯರ ಮೇಲೆ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧ್ಯಕ್ಷರಿಗೆ ಪತ್ರ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಗಾವತಿ ಕ್ಷೇತ್ರದ ಇಬ್ಬರು ಸದಸ್ಯರು ತಾಲ್ಲೂಕು ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯನ್ನು ಬೆಂಬಲಿಸದೆ, ಬಿಜೆಪಿಯನ್ನು ಬೆಂಬಲಿಸುವ ಮೂಲಕ ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ.
ಈ ಹಿನ್ನೆಲೆ, ಬಸವಪಟ್ಟಣದ ಸುನಿತಾ ಹಾಗೂ ಚಿಕ್ಕಬೆಣಕಲ್ ಕ್ಷೇತ್ರದ ಗೀತಾ ಆನಂದ್ಗೌಡ ವಿರುದ್ಧ ಈಗಾಗಲೇ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆಯಲಾಗಿದೆ ಎಂದರು.