ಕರ್ನಾಟಕ

karnataka

ETV Bharat / state

Job alert: ಕೊಪ್ಪಳ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ 21 ಮೇಲ್ವಿಚಾರಕರ ಹುದ್ದೆ ನೇಮಕಾತಿ - ಮೇಲ್ವಿಚಾರಕ ಹುದ್ದೆಗೆ ಅರ್ಜಿ

ಜಿಲ್ಲೆಯ ಒಟ್ಟು 21 ಗ್ರಾಮ ಪಂಚಾಯಿತಿಯಲ್ಲಿ ಈ ಹುದ್ದೆ ಭರ್ತಿ ಮಾಡಲಾಗುವುದು. ಪಿಯುಸಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

Library assistant Recruitment in Koppal
Library assistant Recruitment in Koppal

By ETV Bharat Karnataka Team

Published : Sep 11, 2023, 12:34 PM IST

ಕೊಪ್ಪಳ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಖಾಲಿ ಇರುವ 21 ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಒಟ್ಟು 21 ಗ್ರಾಮ ಪಂಚಾಯಿತಿಗಳಿಗೆ ಈ ಭರ್ತಿ ಪ್ರಕ್ರಿಯೆ ನಡೆಯಲಿದೆ. ಪಿಯುಸಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಸೂಚನೆ

ಹುದ್ದೆ ವಿವರ: ಕೊಪ್ಪಳ ಜಿಲ್ಲಾ ವ್ಯಾಪ್ತಿಯ 21 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಮೇಲ್ವಿಚಾರಕರ ಹುದ್ದೆ ಭರ್ತಿ

ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ ವಿದ್ಯಾರ್ಹತೆ ಮತ್ತು ಸರ್ಟಿಫಿಕೇಷನ್​ ಕೋರ್ಸ್​ ಇನ್​​ ಲೈಬ್ರರಿ ಸೈನ್ಸ್​ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್​ ಕೋರ್ಸ್​ ಉತ್ತೀರ್ಣರಾಗಿರಬೇಕು.

ಸರ್ಟಿಫಿಕೇಷನ್​ ಕೋರ್ಸ್​ ಇನ್​ ಲೈಬ್ರರಿ ಸೈನ್ಸ್​ ಪದವಿ ಪಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುವುದು.

ವಿಶೇಷ ಸೂಚನೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 40 ವರ್ಷದವರೆಗೆ ವಯೋಮಿತಿ ಸಡಿಲಿಕೆ ನಡೆಸಲಾಗುವುದು.

ಆಯ್ಕೆ: ಮೆರಿಟ್​ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುವುದು

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊಪ್ಪಳ ಜಿಲ್ಲಾ ಪಂಚಾಯತ್​, ಕೊಪ್ಪಳ ಗಂಗಾವತಿ, ಕುಷ್ಟಗಿ, ಯಲಬುರ್ಗಾ, ಕಾರಟಗಿ, ಕನಕಗಿರಿ, ಕುಕನೂರು ತಾಲೂಕು ಪಂಚಾಯಿತಿ ಹಾಗೂ ಹುದ್ದೆ ಖಾಲಿ ಇರುವ 21 ಗ್ರಾಮ ಪಂಚಾಯತಿಗಳಲ್ಲಿ ಅರ್ಜಿ ಪಡೆದು ಇಲ್ಲ, ವೆಬ್​ಸೈಟ್ ಮೂಲಕ ಅರ್ಜಿ ಪಡೆದು ಈ ಕೆಳಗಿನ ವಿಳಾಸಕ್ಕೆ ನೇರವಾಗಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆ ವಿಳಾಸ: ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್​​, ಜಿಲ್ಲಾ ಆಡಳಿತ ಭವನ, ಹೊಸಪೇಟೆ ರೋಡ್​ ಕೊಪ್ಪಳ, ಸೆಪ್ಟೆಂಬರ್​ 9ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನ ಸೆಪ್ಟೆಂಬರ್​ 25 ಆಗಿದೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ koppal.nic.in ಈ ಜಾಲತಾಣಕ್ಕೆ ಭೇಟಿ ನೀಡಬಹುದು. ಹುದ್ದೆ, ಅರ್ಜಿ ಸಲ್ಲಿಕೆ ಕುರಿತ ಸ್ಪಷ್ಟೀಕರಣಕ್ಕೆ 9480871001 ಈ ಸಹಾಯವಾಣಿಗೆ ಸಂಪರ್ಕಿಸಬಹುದು.

ಇದನ್ನೂ ಓದಿ:Job Alert: ರಾಯಚೂರಿನ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯಲ್ಲಿದೆ ಉದ್ಯೋಗಾವಕಾಶ

ABOUT THE AUTHOR

...view details