ಕೊಪ್ಪಳ:ಡಿಸೆಂಬರ್ 29 ರಿಂದ ಡಿ.31 ರವರಗೆ ಜಿಲ್ಲೆಯಲ್ಲಿ ಮದ್ಯಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಆದೇಶ ಹೊರಡಿಸಿದ್ದಾರೆ.
ಹೊಸ ವರ್ಷಾಚರಣೆ ಹಿನ್ನೆಲೆ ಈ ನಿರ್ಧಾರ ಕೈಗೊಂಡಿಲ್ಲ. ಮತ ಎಣಿಕೆ ಪ್ರಯುಕ್ತ ಮುಂಜಾಗ್ರತೆ ಕ್ರಮವಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಡಿಸಿ ಸ್ಪಷ್ಟಪಡಿಸಿದರು.
ಡಿ. 29ರಿಂದ 30ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಮದ್ಯ ಮಾರಾಟ ಬಂದ್ ಓದಿ:ಪೊಲೀಸ್ ಕಾನ್ಸ್ಸ್ಟೆಬಲ್ಗೆ ಆತನ ಸ್ಟೇಷನ್ನಲ್ಲಿಯೇ ಎಫ್‌ಐಆರ್..! ಯಾಕೆ ಗೊತ್ತೇ?
ಇದರ ಜೊತೆಗೆ ಡಿ.30ರ ಬೆಳಗ್ಗೆ 6 ಗಂಟೆಯಿಂದ ಡಿ.31 ಸಂಜೆ 6 ಗಂಟೆಯವರೆಗೆ ಜಿಲ್ಲೆಯಲ್ಲಿ ವಿಜಯೋತ್ಸವ ಹಾಗೂ ಮೆರವಣಿಗೆ ನಡೆಸುವುದನ್ನು ನಿರ್ಬಂಧಿಸಲಾಗಿದೆ.
ಮತ ಎಣಿಕೆ ಕೇಂದ್ರಗಳ ಸುತ್ತ 500 ಮೀಟರ್ ಪ್ರದೇಶ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.