ಕೊಪ್ಪಳ: ಕಲ್ಲು ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವೀರಾಪುರ ಕ್ರಾಸ್ ಬಳಿ ನಡೆದಿದೆ.
ಟ್ರ್ಯಾಕ್ಟರ್, ಲಾರಿ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು - road accident at koppal
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ವೀರಾಪೂರ ಕ್ರಾಸ್ ಬಳಿ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
road accident
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ವೀರಾಪೂರ ಕ್ರಾಸ್ ಬಳಿ ಅಪಘಾತ ಸಂಭವಿಸಿದ್ದು, ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ ರಭಸಕ್ಕೆ ಲಾರಿಯಿಂದ ಹಾರಿ ಬಿದ್ದು ಚಾಲಕ ಮಣಿಕಂಠ (45) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಲ್ಲು ತುಂಬಿಕೊಂಡು ಟ್ರ್ಯಾಕ್ಟರ್ ಹಲಗೇರಿ ಕಡೆಗೆ ಬರುತ್ತಿತ್ತು. ಅಪಘಾತ ನಡೆದ ಸ್ಥಳದಿಂದ ಸುಮಾರು 300 ಮೀಟರ್ ದೂರದಲ್ಲಿ ಲಾರಿ ಚಾಲಕನ ಶವ ಬಿದ್ದಿದ್ದು, ಟ್ರ್ಯಾಕ್ಟರ್ ಹಾಗೂ ಲಾರಿ ನುಜ್ಜುಗುಜ್ಜಾಗಿದೆ.
ಇನ್ನು ಟ್ರ್ಯಾಕ್ಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಕುರಿತು ಕುಕನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.