ಗಂಗಾವತಿ:ಕರ್ನಾಟಕ ಪಬ್ಲಿಕ್ ಶಾಲೆಗೆ ಮಕ್ಕಳಿಗೆ ಪ್ರವೇಶ ನೀಡುವ ವೇಳೆ ನಡೆಸಲಾದ ಲಾಟರಿಯಲ್ಲಿ ನಡೆದ ಗೋಲ್ ಮಾಲ್ ಹಾಗೂ ಆಯ್ಕೆ ಪ್ರಕ್ರಿಯೆಯಲ್ಲಿ ಬೇಜವಾಬ್ದಾರಿತನ ತೋರಿದ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕರೊಬ್ಬರನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಶಾಲೆಯಲ್ಲಿ ಲಾಟರಿ ಗೋಲ್ ಮಾಲ್ : ಶಿಕ್ಷಣ ಇಲಾಖೆಯಿಂದ ಮುಖ್ಯಶಿಕ್ಷಕ ಅಮಾನತು - Lottery Goal Mall at school
ಗಂಗಾವತಿ ಪಟ್ಟಣದ ಶಾಲೆವೊಂದರಲ್ಲಿ ನಡೆದ ಲಾಟರಿ ಹಾಗೂ ಆಯ್ಕೆ ಪ್ರಕ್ರಿಯೆಯಲ್ಲಿ ಬೇಜವಾಬ್ದಾರಿ ತೋರಿದ ಮುಖ್ಯಶಿಕ್ಷಕರನ್ನು ಶಿಕ್ಷಣ ಇಲಾಖೆ ಅಮಾನತು ಮಾಡಿದೆ.
Gangavati
ಕನಕಗಿರಿ ಪಟ್ಟಣದ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವಿ. ಮಧುಸೂದನ ಎಂಬುವವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮ ಶೇಖರಗೌಡ ಅವರ ಶಿಫಾರಸ್ಸಿನ ಮೇರೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಿ.ಬಿ.ನೀರಲಕೇರಿ ಅಮಾನತು ಮಾಡಿದ್ದಾರೆ.
ಕರ್ನಾಟಕ ಪಬ್ಲಿಕ್ ಶಾಲೆಗೆ ಎಲ್ ಕೆಜಿ ಹಾಗೂ ಒಂದನೇ ತರಗತಿಯ ಮಕ್ಕಳಿಗೆ ಇಂಗ್ಲೀಷ್ ಮಾಧ್ಯಮದ ಪ್ರವೇಶ ಸಂದರ್ಭದಲ್ಲಿ ಅಕ್ರಮಕ್ಕೆ ಈ ಮುಖ್ಯ ಶಿಕ್ಷಕ ಅವಕಾಶ ಮಾಡಿ ಕೊಟ್ಟಿದ್ದಾರೆ ಎಂದು ಆರೋಪಿಸಿ ಎರಡು ಬಣದ ಪಾಲಕರು, ವಿದ್ಯಾರ್ಥಿ ಸಂಘಟನೆಗಳ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಇಲಾಖೆ ಈ ಕ್ರಮ ಕೈಗೊಂಡಿದೆ.