ಕರ್ನಾಟಕ

karnataka

ETV Bharat / state

ಗಂಗಾವತಿ: ಆರ್ಹಾಳದಲ್ಲಿ ಬೋನಿಗೆ ಬಿದ್ದ ಗಂಡು ಚಿರತೆ - ಗ್ರಾಮಸ್ಥರು ಆತಂಕ ವ್ಯಕ್ತ

ಕಳೆದ ಹಲವು ದಿನಗಳಿಂದ ಚಿರತೆ ಉಪಟಳದ ಬಗ್ಗೆ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದರು.

A male leopard fell into a bone in Arhala
ಆರ್ಹಾಳದಲ್ಲಿ ಬೋನಿಗೆ ಬಿದ್ದ ಗಂಡು ಚಿರತೆ

By

Published : Oct 30, 2022, 2:22 PM IST

ಗಂಗಾವತಿ:ಆಗಾಗ ಬೆಟ್ಟದಲ್ಲಿ ಕಾಣಿಸಿಕೊಂಡು ರೈತರು ಮತ್ತು ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿದ್ದು ಚಿರತೆಯೊಂದು ತಾಲ್ಲೂಕಿನ ಆರ್ಹಾಳ ಗ್ರಾಮದ ಬೆಟ್ಟದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಸೆರೆಯಾದ ಗಂಡು ಚಿರತೆಗೆ 6-7 ವರ್ಷದ ಪ್ರಾಯವಾಗಿರಬಹುದು ಎಂದು ಆರ್​ಎಫ್ಒ ಶಿವರಾಜ ಮೇಟಿ ತಿಳಿಸಿದ್ದಾರೆ.

ಕಳೆದ ಹಲವು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದರು. ಅಲ್ಲದೇ ಗ್ರಾಮಕ್ಕೆ ನುಗ್ಗಿದ್ದ ಚಿರತೆ, ನಾಯಿಗಳನ್ನು ಎಳೆದೊಯ್ದಿತ್ತು. ಹೀಗಾಗಿ ಬೆಟ್ಟದ ಸಮೀಪ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟಿದ್ದರು. ಚಿರತೆ ಬೋನಿಗೆ ಬಿದ್ದಿರುವ ಮಾಹಿತಿ ಸಾರ್ವಜನಿಕರಿಂದ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತೆರಳಿ ಚಿರತೆಗೆ ಪ್ರಾಥಮಿಕ ಆರೋಗ್ಯ ತಪಾಸಣೆ ಮಾಡಲಾಯಿತು. ಆಹಾರ ನೀಡಿ ಗದಗದ ಪ್ರಾಣಿ ಸಂಗ್ರಹಾಲಯಕ್ಕೆ ಸುರಕ್ಷಿತವಾಗಿ ಬಿಟ್ಟು ಬರಲಾಗಿದೆ ಎಂದು ಅರಣ್ಯ ಸಿಬ್ಬಂದಿ ತಿಳಿಸಿದ್ದಾರೆ.

ಇದನ್ನೂ ಓದಿ:ಹಸು ಕೊಂದು ಎಳೆದೊಯ್ದ ಚಿರತೆಯ ದೃಶ್ಯ ಸೆರೆ: ಆತಂಕದಲ್ಲಿ ಗ್ರಾಮಸ್ಥರು

ABOUT THE AUTHOR

...view details