ಕೊಪ್ಪಳ: ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಇಂದು ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 40 ಕ್ಕೆ ಏರಿಕೆಯಾಗಿದೆ.
ಕೊಪ್ಪಳದಲ್ಲಿ ಕೊರೊನಾಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 40ಕ್ಕೆ ಏರಿಕೆ - Koppal covid cases
ಕೊಪ್ಪಳ ಜಿಲ್ಲೆಯಲ್ಲಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊರೊನಾ ಸೋಂಕಿಗೆ ಯಲಬುರ್ಗಾ ಪಟ್ಟಣದ 60 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.
![ಕೊಪ್ಪಳದಲ್ಲಿ ಕೊರೊನಾಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 40ಕ್ಕೆ ಏರಿಕೆ Koppal](https://etvbharatimages.akamaized.net/etvbharat/prod-images/768-512-10:22:09:1596775929-kn-kpl-01-07-sonkita-death-photo-7202284-07082020101603-0708f-1596775563-846.jpg)
Koppal
ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯ ಯಲಬುರ್ಗಾ ಪಟ್ಟಣದ 60 ವರ್ಷದ ವ್ಯಕ್ತಿ ಆಗಸ್ಟ್ 2 ರಂದು ಕೊಪ್ಪಳದ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಅವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚುತ್ತಿರುವುದು ಜಿಲ್ಲೆಯ ಜನರಲ್ಲಿ ಆತಂಕ ಉಂಟುಮಾಡಿದೆ.