ಕೊಪ್ಪಳ:ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಲೆಗೈದಿರುವ ಘಟನೆ ಯಲಬುರ್ಗಾ ತಾಲೂಕಿನ ವಟಪರ್ವಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ವಟಪರ್ವಿಯ ಪ್ರಭುರಾಜ ಕೊಳಜಿ (38) ಸಾವಿಗೀಡಾಗಿದ್ದಾರೆ. ಸೋಮವಾರದಿಂದ ನಾಪತ್ತೆಯಾಗಿದ್ದ ಪ್ರಭುರಾಜ, ಮಂಗಳವಾರ ರಾತ್ರಿ ತೋಟದ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬೇವೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಎಸ್ಪಿ ಹೇಳಿಕೆ:"ಪ್ರಭುರಾಜ್ ಎಂಬವರು ಸೋಮವಾರ ನಾಪತ್ತೆಯಾಗಿದ್ದರು. ಮಂಗಳವಾರ ರಾತ್ರಿ ಮಲಗಿರುವ ಸ್ಥಳದಲ್ಲೇ ಕೊಲೆಯಾದಂತೆ ತೋಟದ ಮನೆಯಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ಬಂತು. ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಂದ ಮಾಹಿತಿ ಪಡೆದಿದ್ದೇವೆ. ಕುಟುಂಬಸ್ಥರು ಯಾರ ಮೇಲೆಯೂ ಅನುಮಾನ ವ್ಯಕ್ತಪಡಿಸಿಲ್ಲ. ಮೃತ ವ್ಯಕ್ತಿಗೆ ಇಬ್ಬರು ಮಕ್ಕಳಿದ್ದಾರೆ. ಆತ ಕುಡಿತದ ಚಟಕ್ಕೆ ದಾಸನಾಗಿದ್ದ ಎಂದು ಪತ್ನಿ ತಿಳಿಸಿದ್ದಾರೆ. ಕುಟುಂಬಸ್ಥರ ದೂರಿನಂತೆ ಬೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದಷ್ಟು ಬೇಗ ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು" ಎಂದು ಕೊಪ್ಪಳ ಎಸ್ಪಿ ಯಶೋಧ ವಂಟಗೋಡಿ ಮಾಹಿತಿ ನೀಡಿದರು.