ಕೊಪ್ಪಳ: ಬೈಕ್‌ನ ಸೈಡ್ ಬ್ಯಾಗ್ನಲ್ಲಿದ್ದ ಒಂದು ಲಕ್ಷ ರೂಪಾಯಿ ಹಣವನ್ನು ಚಾಲಾಕಿ ಕಳ್ಳನೋರ್ವ ಜನರ ಮಧ್ಯೆಯೇ ಕಳ್ಳತನ ಮಾಡಿರುವ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ. ಹೊಸಪೇಟೆ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್‌ವೊಂದರಲ್ಲಿ ನಿನ್ನೆ ಈ ಘಟನೆ ನಡೆದಿದ್ದು, ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕೊಪ್ಪಳ ತಾಲೂಕಿನ ಲಾಚನಕೇರಿ ಗ್ರಾಮದ ಚನ್ನಪ್ಪ ಹನುಮನಗೌಡ ಪೊಲೀಸ್ ಪಾಟೀಲ್ ಎಂಬಾತ ಹಣ ಕಳೆದುಕೊಂಡ ವ್ಯಕ್ತಿ. ಇವರು ಒಂದು ಲಕ್ಷ ರೂಪಾಯಿ ಹಣವನ್ನು ಬೈಕ್‌ನ ಸೈಡ್ ಬ್ಯಾಗ್ನಲ್ಲಿಟ್ಟುಕೊಂಡು ಪೆಟ್ರೋಲ್ ಹಾಕಿಸಿಕೊಳ್ಳಲು ಬಂದಿದ್ದರು. ಈ ವೇಳೆ ಘಟನೆ ನಡೆದಿದೆ.