ಕೊಪ್ಪಳ:ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ದೇವರಾಜ ಅರಸು ಕಾಲೋನಿಯಲ್ಲಿ ನಡೆದಿದೆ.
ಪ್ರಿಯಕರನ ಜೊತೆ ಮದುವೆ ಮಾಡಿಕೊಂಡ ಮಗಳು: ಮನ ನೊಂದು ತಂದೆ ಆತ್ಮಹತ್ಯೆ! - Man suicide in Koppal
ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪಳ ನಗರದ ದೇವರಾಜ ಅರಸು ಕಾಲೋನಿಯಲ್ಲಿ ನಡೆದಿದೆ. ಮಗಳು ಪ್ರಿಯಕರನೊಂದಿಗೆ ಪರಾರಿಯಾಗದಿದ್ದರಿಂದ ಮನನೊಂದು ಆತ್ಮಹತ್ಯೆ ಶರಣಾಗಿದ್ದಾನೆ ಎನ್ನಲಾಗಿದೆ.
![ಪ್ರಿಯಕರನ ಜೊತೆ ಮದುವೆ ಮಾಡಿಕೊಂಡ ಮಗಳು: ಮನ ನೊಂದು ತಂದೆ ಆತ್ಮಹತ್ಯೆ! Man suicide in Koppal](https://etvbharatimages.akamaized.net/etvbharat/prod-images/768-512-6480555-thumbnail-3x2-hrs.jpg)
ಕೊಪ್ಪಳದಲ್ಲಿ ವ್ಯಕ್ತಿ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬಸವರಾಜ ಎಂದು ಗುರುತಿಸಲಾಗಿದೆ. ಮೃತ ಬಸವರಾಜನ ಮಗಳು ತಿಂಗಳ ಹಿಂದೆ ಪ್ರಿಯಕರನೊಂದಿಗೆ ಓಡಿ ಹೋಗಿ ಮದುವೆಯಾಗಿದ್ದಳು. ಪೋಷಕರು ಕರೆದರೂ ಆಕೆ ವಾಪಸ್ ಬಂದಿರಲಿಲ್ಲ. ಇದರಿಂದ ಮನನೊಂದು ಬಸವರಾಜ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಬಸವರಾಜ್ ಕುಟುಂಬಸ್ಥರ ಆಕ್ರಂದನ
ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Last Updated : Mar 20, 2020, 7:11 PM IST