ಗಂಗಾವತಿ(ಕೊಪ್ಪಳ):ತಾಲೂಕಿನ ಚಿಕ್ಕರಾಂಪೂರದ ಬಳಿ ಇರುವ ವಿಶ್ವ ವಿಖ್ಯಾತ ಧಾರ್ಮಿಕ ತಾಣ ಅಂಜನಾದ್ರಿ ದೇಗುಲಕ್ಕೆ ಕೇಂದ್ರದ ವಿದೇಶಾಂಗ ವ್ಯವಹಾರ ಮತ್ತು ಸಾಂಸ್ಕೃತಿಕ ಖಾತೆಯ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಭೇಟಿ ನೀಡಿ ಆಂಜನೇಯನ ದರ್ಶನ ಪಡೆದರು.
ಕೇಂದ್ರ ಸಚಿವೆ ದೇಗುಲ ದರ್ಶನಕ್ಕೆ ಆಗಮಿಸುತ್ತಿರುವ ಮಾಹಿತಿ ಪಡೆದ ಶಾಸಕ ಪರಣ್ಣ ಮುನವಳ್ಳಿ ಸ್ಥಳಕ್ಕೆ ಭೇಟಿ ನೀಡಿ ಸಚಿವರನ್ನು ಸ್ವಾಗತಿಸಿದರು. ಬಳಿಕ ಅಂಜನಾದ್ರಿ ದೇಗುಲದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ವಿವರಣೆ ನೀಡಿದರು. ಅಂಜನಾದ್ರಿಯಲ್ಲಿ ಥೀಮ್ ಪಾರ್ಕ್ ಸ್ಥಾಪಿಸುವ ಉದ್ದೇಶವಿದ್ದು, ಇದಕ್ಕಾಗಿ ಕೇಂದ್ರದಿಂದ ಪ್ರತ್ಯೇಕ ಒಂದು ನೂರು ಕೋಟಿ ರೂಪಾಯಿ ಮೊತ್ತದ ವಿಶೇಷ ಪ್ಯಾಕೇಜ್ ಕೊಡಿಸುವಲ್ಲಿ ವಿಶೇಷ ಆಸಕ್ತಿ ವಹಿಸುವಂತೆ ಮನವಿ ಪತ್ರ ಸಲ್ಲಿಸಿದರು.