ಗಂಗವತಿ (ಕೊಪ್ಪಳ): ವೇತನ ಪರಿಷ್ಕರಣೆ, ಸೇವಾ ಭದ್ರತೆ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನೂರಾರು ಬಿಸಿಯೂಟ ನೌಕರರು ನಗರದಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಸುವಂತೆ ಬಿಸಿಯೂಟ ನೌಕರರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ - Gangavathi News
ಇಲ್ಲಿನ ತಾಲೂಕು ಪಂಚಾಯಿತಿ ಆವರಣದಲ್ಲಿ ಸೇರಿದ್ದ ನೌಕರರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕಳೆದ 6 ತಿಂಗಳಿಂದ ವೇತನ ಇಲ್ಲದೇ ನೌಕರರ ಕುಟುಂಬ ನಿರ್ವಹಣೆಗೂ ಸಮಸ್ಯೆ ಎದುರಿಸುತ್ತಿರುವುದಾಗಿ ಸಂಕಷ್ಟ ಹೇಳಿಕೊಂಡಿದ್ದಾರೆ.
ವಿವಿಧ ಬೇಡಿಕೆಗಳ ಇಡೇರಿಸುವಂತೆ ಬಿಸಿಯೂಟ ತಯಾರಕರ ಅನಿರ್ದಿಷ್ಟಾವಧಿ ಸತ್ಯಾಗ್ರಹ
ಇಲ್ಲಿನ ತಾಲೂಕು ಪಂಚಾಯಿತಿ ಆವರಣದಲ್ಲಿ ಸೇರಿದ್ದ ನೌಕರರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕಳೆದ 6 ತಿಂಗಳಿಂದ ವೇತನ ಇಲ್ಲದೇ ನೌಕರರ ಕುಟುಂಬ ನಿರ್ವಹಣೆಗೂ ಸಮಸ್ಯೆ ಎದುರಿಸುತ್ತಿರುವುದಾಗಿ ಅಳಲು ತೋಡಿಕೊಂಡಿದ್ದಾರೆ.
ಕೂಡಲೆ ಈ ಬಗ್ಗೆ ಗಮನಹರಿಸಿ ವೇತನ ಬಿಡುಗಡೆ ಮಾಡಬೇಕು, ಸೇವಾ ಭದ್ರತೆ ನೀಡಿ ಶಾಸನಬದ್ಧ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಬಿಸಿಯೂಟ ನೌಕರರಾದ ಲಕ್ಷ್ಮಿದೇವಿ ಆಗ್ರಹಿಸಿದರು.