ಕೊಪ್ಪಳ:ಬೆಂಗಳೂರು ಸೇರಿದಂತೆ ಬೇರೆ ರಾಜ್ಯಗಳಿಂದ ಮರಳಿರುವ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ಧಾಪುರದ ನೂರಾರು ವಲಸಿಗರು ಗ್ರಾಮದ ಬಳಿಯ ಜಮೀನಿನಲ್ಲಿ ಬೀಡು ಬಿಟ್ಟಿದ್ದಾರೆ.
ಜಿಲ್ಲೆಗೆ ಮರಳಿದವರ ಕ್ವಾರಂಟೈನ್ಗೆ ನಕಾರ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ - ವಲಸಿಗರಿಗೆ ಕ್ವಾರಂಟೈನ್ ಮಾಡಲು ನಕಾರ
ಬೇರೆ ರಾಜ್ಯಗಳಿಂದ ಆಗಮಿಸಿದ ವಲಸಿಗರನ್ನ ತಾಲೂಕು ಆಡಳಿತ ಕ್ವಾರಂಟೈನ್ ಮಾಡದ ಹಿನ್ನೆಲೆಯಲ್ಲಿ ಗ್ರಾಮದ ಬಳಿಯ ಜಮೀನಿನಲ್ಲಿ ಟೆಂಟ್ ಹಾಕಿಕೊಂಡು ಬೀಡು ಬಿಟ್ಟಿದ್ದಾರೆ. ಬೆಂಗಳೂರು, ತಮಿಳುನಾಡಿನಿಂದ ಸುಮಾರು 150 ಕ್ಕೂ ಹೆಚ್ಚು ಕಾರ್ಮಿಕರು ಸಿದ್ಧಾಪುರ ಗ್ರಾಮಕ್ಕೆ ಬಂದಿದ್ದಾರೆ.
ಇವರನ್ನು ತಾಲೂಕು ಆಡಳಿತ ಕ್ವಾರಂಟೈನ್ ಮಾಡದ ಹಿನ್ನೆಲೆಯಲ್ಲಿ ಗ್ರಾಮದ ಬಳಿಯ ಜಮೀನಿನಲ್ಲಿ ಟೆಂಟ್ ಹಾಕಿಕೊಂಡು ಬೀಡು ಬಿಟ್ಟಿದ್ದಾರೆ. ಬೆಂಗಳೂರು, ತಮಿಳುನಾಡಿನಿಂದ ಸುಮಾರು 150ಕ್ಕೂ ಹೆಚ್ಚು ಕಾರ್ಮಿಕರು ಸಿದ್ಧಾಪುರ ಗ್ರಾಮಕ್ಕೆ ಬಂದಿದ್ದಾರೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಗ್ರಾಮಸ್ಥರು ಇವರನ್ನು ಗ್ರಾಮದೊಳಗೆ ಬಿಟ್ಟುಕೊಳ್ಳಲು ಒಪ್ಪುತ್ತಿಲ್ಲ.
ಮರಳಿ ಊರಿಗೆ ಬಂದಿರುವ ಸುಮಾರು 150 ಕ್ಕೂ ಹೆಚ್ಚು ಜನರು ಜಮೀನಿನಲ್ಲಿ ಟೆಂಟ್ ಹಾಕಿಕೊಂಡು ವಾಸ್ತವ್ಯ ಮಾಡಿದ್ದಾರೆ. ಇವರನ್ನು ಸೂಕ್ತ ಸ್ಥಳದಲ್ಲಿ ಕ್ವಾರಂಟೈನ್ ಮಾಡಿ ಎಂಬ ಗ್ರಾಮಸ್ಥರ ಮನವಿಗೆ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.