ಗಂಗಾವತಿ:ತಾಲೂಕಿನ ವಿರೂಪಾಪುರ ಗಡ್ಡೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರ ಆಗ್ರಹಕ್ಕೆ ಮಣಿದು ಸಚಿವ ಆನಂದ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾನಿರತರ ಅಹವಾಲು ಆಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೂಟ್ ಅಟ್ ಸೈಟ್ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಬಗ್ಗೆ ಸೋಮವಾರ ಅಥವಾ ಮಂಗಳವಾರದೊಳಗೆ ಆದೇಶಕ್ಕೆ ಪ್ರಯತ್ನಿಸಲಾಗುವುದು. ಮೃತ ಯುವಕನ ಕುಟುಂಬಕ್ಕೆ ಇಲಾಖೆಯಿಂದ ಹತ್ತು ಲಕ್ಷ ರೂಪಾಯಿ ಪರಿಹಾರ ಕೊಡಿಸಲಾಗುವುದು ಎಂದರು.