ಕರ್ನಾಟಕ

karnataka

ETV Bharat / state

ಹೊಸಪೇಟೆಗೆ ಜಿಲ್ಲಾ ಕೇಂದ್ರವಾಗಲು ಎಲ್ಲಾ ಅರ್ಹತೆ ಇದೆ: ಆನಂದ್ ​ಸಿಂಗ್​ - ವಿಜಯನಗರ ಜಿಲ್ಲೆ ರಚನೆಗೆ ವಿರೋಧ

ಹೊಸಪೇಟೆ ವಿಜಯನಗರ ಜಿಲ್ಲೆಯ ಜಿಲ್ಲಾ ಕೇಂದ್ರವಾಗಲಿದೆ. ಜಿಲ್ಲಾ ಕೇಂದ್ರವಾಗಲು ಹೊಸಪೇಟೆಗೆ ಎಲ್ಲಾ ಅರ್ಹತೆ ಇದೆ. ಇದರಿಂದ ಯಾವುದೇ ತೊಂದರೆಯಿಲ್ಲ ಎಂದು ಸಚಿವ ಆನಂದ್ ಸಿಂಗ್ ಹೇಳಿದರು.

Forest Department Minister Anand Singh
ಅರಣ್ಯ ಇಲಾಖೆ ಸಚಿವ ಆನಂದ್ ಸಿಂಗ್

By

Published : Nov 21, 2020, 8:08 PM IST

ಕೊಪ್ಪಳ: ವಿಜಯನಗರ ಜಿಲ್ಲೆಯ ಜಿಲ್ಲಾ ಕೇಂದ್ರವಾಗಲು ಹೊಸಪೇಟೆಗೆ ಎಲ್ಲಾ ಅರ್ಹತೆ ಇದೆ ಎಂದು ಅರಣ್ಯ ಇಲಾಖೆ ಸಚಿವ ಆನಂದ್ ಸಿಂಗ್ ಹೇಳಿದರು.

ಮುನಿರಾಬಾದ್​​​ನ ಕಾಡಾ ಕಚೇರಿಯಲ್ಲಿ ನಡೆದ ಐಸಿಸಿ ಸಭೆ ಬಳಿಕ ಮಾತನಾಡಿದ ಅವರು, ವಿಜಯನಗರ ಜಿಲ್ಲಾ ರಚನೆಗೆ ಸ್ವಪಕ್ಷೀಯರಿಂದ ವಿರೋಧವಿಲ್ಲ. ಹಳೆಯ ಹೇಳಿಕೆಗಳನ್ನು ಮಾಧ್ಯಮಗಳು ಪ್ರಸಾರ ಮಾಡುತ್ತಿವೆ ಎಂದರು.

ವಿಜಯನಗರ ಇತಿಹಾಸ, ಸಂಸ್ಕೃತಿ ಎತ್ತಿಹಿಡಿಯುವ ನಿಟ್ಟಿನಲ್ಲಿ ತಾಂತ್ರಿಕವಾಗಿ ವಿಜಯನಗರ ಜಿಲ್ಲೆಯ ಜಿಲ್ಲಾ ಕೇಂದ್ರ ಯಾವುದು ಆಗಬೇಕು ಎಂಬುದರ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಅದರಂತೆ ಹೊಸಪೇಟೆ ಜಿಲ್ಲಾ ಕೇಂದ್ರವಾಗಲಿದೆ. ಇದರಿಂದ ಯಾವುದೇ ತೊಂದರೆ ಇಲ್ಲ ಎಂದರು.

ಅರಣ್ಯ ಇಲಾಖೆ ಸಚಿವ ಆನಂದ್ ಸಿಂಗ್

ಈ ಹಿಂದೆ ನಾನು ಮಾಡಿದ್ದ ವಿರೋಧದ ಕುರಿತು ನಾನು ಈಗಲೂ ಬದ್ಧವಾಗಿದ್ದೇನೆ ಎಂದ ಅವರು, ಆನೆಗುಂದಿ ಬಳಿ ಚಿರತೆಗೆ ಬಲಿಯಾದ ವ್ಯಕ್ತಿ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ ಈಗಾಗಲೇ ₹7.5 ಲಕ್ಷ ಪರಿಹಾರ ನೀಡಲಾಗಿದೆ ಎಂದರು.

ABOUT THE AUTHOR

...view details