ಕರ್ನಾಟಕ

karnataka

ETV Bharat / state

ಯಲಬುರ್ಗಾ : ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದ ಸಚಿವ ಬಿ ಸಿ ಪಾಟೀಲ್ - ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ

ಕೇಂದ್ರದಲ್ಲಿ ಮೋದಿ ಸರ್ಕಾರ ಬಂದ ಬಳಿಕ ರೈತರು ಫಸಲ್ ಭೀಮಾ ಯೋಜನೆಯ ಮೂಲಕ ಹೆಚ್ಚಿನ ಅನುಕೂಲತೆ ಪಡೆಯುತ್ತಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ. ಅದು ನನ್ನ ಕರ್ತವ್ಯವೂ ಹೌದು..

Minister B C Patil inauguration construction of various works
ಯಲಬುರ್ಗಾ: ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದ ಸಚಿವ ಬಿ.ಸಿ. ಪಾಟೀಲ್

By

Published : Sep 11, 2020, 2:44 PM IST

ಕೊಪ್ಪಳ :ಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ ಸುಮಾರು 4.91 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಬಿ ಸಿ ಪಾಟೀಲ್ ನೆರವೇರಿಸಿದರು.

ಯಲಬುರ್ಗಾ ಪಟ್ಟಣದ ಕಲಾ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಲಬುರ್ಗಾ ಪಟ್ಟಣದ ಅಭಿವೃದ್ಧಿ ಕಾಮಗಾರಿ, ಹಳ್ಳಕ್ಕೆ ತಡೆಗೋಡೆ ನಿರ್ಮಾಣ, ಮೂಲಸೌಕರ್ಯ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿದರು.

ಬಳಿಕ ಮಾತನಾಡಿದ ಸಚಿವ ಬಿ ಸಿ ಪಾಟೀಲ್‌ ಅವರು, ಕೇಂದ್ರದಲ್ಲಿ ಮೋದಿ ಸರ್ಕಾರ ಬಂದ ಬಳಿಕ ರೈತರು ಫಸಲ್ ಭೀಮಾ ಯೋಜನೆಯ ಮೂಲಕ ಹೆಚ್ಚಿನ ಅನುಕೂಲತೆ ಪಡೆಯುತ್ತಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ. ಅದು ನನ್ನ ಕರ್ತವ್ಯವೂ ಸಹ. ಪ್ರಕೃತಿ ವಿಕೋಪ ನಿಧಿಯಡಿ ಜಿಲ್ಲೆಗೆ ಸರ್ಕಾರ 45 ಕೋಟಿ ರೂ. ಬಿಡುಗಡೆ ಮಾಡಿರೋ ಸಿಎಂ, ಜನರ ಜೊತೆ ಸರ್ಕಾರವಿದೆ ಎಂದು ಹೇಳಿದ್ದಾರೆ.

ಕೃಷಿ ಇಲಾಖೆಯಿಂದ ನನ್ನ ಬೆಳೆ, ನನ್ನ ಹಕ್ಕು ಎಂಬ ಪರಿಕಲ್ಪನೆಯಡಿ ಬೆಳೆ ಸಮೀಕ್ಷೆ ಆ್ಯಪ್‌ನ ಸರ್ಕಾರ ಬಿಡುಗಡೆ ಮಾಡಿ ರೈತರಿಗೆ ಅನುಕೂಲ ಮಾಡಿದೆ ಎಂದು ಸಚಿವ ಬಿ ಸಿ ಪಾಟೀಲ್ ಹೇಳಿದರು.

ABOUT THE AUTHOR

...view details