ಗಂಗಾವತಿ : ನಗರದ ಉಪ ವಿಭಾಗ ಆಸ್ಪತ್ರೆಗೆ ಬಂದರೆ ಸರ್ಕಾರಿ ಆಸ್ಪತ್ರೆಗೆ ಬಂದಿದ್ದೇನೆ ಎನಿಸುತ್ತಿಲ್ಲ. ಬದಲಿಗೆ ಯಾವುದೋ ಕಾರ್ಪೊರೇಟ್ ಸಂಸ್ಥೆಯ ಆಸ್ಪತ್ರೆಗೆ ಬಂದಂತೆ ಭಾಸವಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ನಗರದ ಉಪ ವಿಭಾಗ ಆಸ್ಪತ್ರೆಗೆ ಭೇಟಿ ನೀಡಿದ್ದ ಅವರು, ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದಾಗ ಬೆಂಗಳೂರಿನ ಯಾವುದೋ ಕಾರ್ಪೊರೇಟ್ ಆಸ್ಪತ್ರೆಗೆ ಭೇಟಿ ನೀಡಿದ ಅನುಭವವಾಗುತ್ತಿದೆ. ಕಾರ್ಪೊರೇಟ್ ಆಸ್ಪತ್ರೆಗಳಿಗಿಂತ ಒಂದು ಹೆಜ್ಜೆ ಈ ಸರ್ಕಾರಿ ಆಸ್ಪತ್ರೆ ಮುಂದಿದೆ ಎಂದರು.