ಕೊಪ್ಪಳ: ಹೈದರಾಬಾದ್ ನಿಜಾಮನ ಕಪಿಮುಷ್ಠಿಯಿಂದ ಸ್ವತಂತ್ರಗೊಂಡ ಹಿನ್ನೆಲೆ ಕಲ್ಯಾಣ ಕರ್ನಾಟಕ ವಿಮೋಚನಾ ದಿನವನ್ನು ಕೊಪ್ಪಳದಲ್ಲೂ ಆಚರಿಸಲಾಯಿತು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಮೋಚನಾ ದಿನಾಚರಣೆಯಲ್ಲಿ ಸಚಿವ ಹಾಲಪ್ಪ ಆಚಾರ್ ಧ್ವಜಾರೋಹಣ ನೆರವೇರಿಸಿದ್ದಾರೆ.
ಬಳಿಕ ತೆರೆದ ವಾಹನದಲ್ಲಿ ತೆರಳಿ ಪರೇಡ್ ವೀಕ್ಷಿಸಿದರು. ನಂತರ ಪೊಲೀಸ್, ಗೃಹರಕ್ಷಕ ದಳ, ಎನ್ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ ಸೇರಿದಂತೆ ವಿವಿಧ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಸಚಿವ ಹಾಲಪ್ಪ ಆಚಾರ್, ಭಾರತ ಸ್ವಾತಂತ್ರ್ಯಗೊಂಡರೂ ಸಹ ಹೈದರಾಬಾದ್ ಕರ್ನಾಟಕ ಪ್ರದೇಶ ಹೈದರಾಬಾದ್ ನಿಜಾಮ ಆಡಳಿತದಲ್ಲಿತ್ತು.
ಹೈದರಾಬಾದ್ ನಿಜಾಮನ ಕಪಿಮುಷ್ಠಿಯಿಂದ ಮುಕ್ತಗೊಳಿಸಲು ಅನೇಕ ಸ್ವಾತಂತ್ರ್ಯ ಹೋರಾಟಗಾರರು ತ್ಯಾಗ ಬಲಿದಾನ ಮಾಡಿದ್ದಾರೆ ಎಂದು ವಿಮೋಚನೆಯ ಹೋರಾಟವನ್ನು ಸ್ಮರಿಸಿದರು.
ಕಲ್ಯಾಣ ಕರ್ನಾಟಕ ದಿನಾಚರಣೆ ನಿಮಿತ್ತ ಸಚಿವ ಹಾಲಪ್ಪ ಆಚಾರ್ ಧ್ವಜಾರೋಹಣ ಅಲ್ಲದೇ ತ್ಯಾಗ ಬಲಿದಾನಗಳ ಮೂಲಕ ಗಳಿಸಿಕೊಟ್ಟಿರುವ ಸ್ವಾತಂತ್ರ್ಯ ಉಳಿಸಿಕೊಂಡು ಹೋಗಬೇಕು. ವಿಮೋಚನಾ ಹೋರಾಟಗಾರರನ್ನು ನಾವು ಸ್ಮರಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಸಂಸದ ಸಂಗಣ್ಣ ಕರಡಿ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯತ್ ಸಿಇಒ ಫೌಜಿಯಾ ತರುನಮ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ:ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ