ಕೊಪ್ಪಳ:ಕಾಂಗ್ರೆಸ್ನವರಿಗೆ ಮಾಡಲು ಕೆಲಸವಿಲ್ಲ. ಇದರಿಂದ ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಬಿಟ್ ಕಾಯಿನ್ (Bitcoin) ವಿಚಾರದಲ್ಲಿ ಶ್ರೀಕಿ ಎಂಬುವವರ ಬಂಧನವಾದರೆ ಬಿಜೆಪಿಗೇನು ಸಂಬಂಧ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ಪ್ರಶ್ನಿಸಿದ್ದಾರೆ.
ಜಿಲ್ಲೆಯ ಕನಕಗಿರಿ ತಾಲೂಕಿನ ಜೀರಾಳ ಕಲ್ಗುಡಿ ಗ್ರಾಮದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್‌ನವರು ಅಂತೆಕಂತೆ ಮೇಲೆ ಅರಮನೆ ಕಟ್ಟುತ್ತಿದ್ದಾರೆ. ಬಿಟ್ ಕಾಯಿನ್ ಬಗ್ಗೆ ನನಗೂ ಗೊತ್ತಿಲ್ಲ, ನಿಮಗೂ ಗೊತ್ತಿಲ್ಲ. ಕಾಂಗ್ರೆಸ್ನವರಿಗೆ ಮಾಡುವುದಕ್ಕೆ ಏನೂ ಕೆಲಸವಿಲ್ಲ. ಸುಮ್ಮನೆ ಬಿಜೆಪಿ ಮೇಲೆ ಆರೋಪ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದರು.