ಕುಷ್ಟಗಿ(ಕೊಪ್ಪಳ): ಬಿಟ್ ಕಾಯಿನ್ (Bitcoin) ಬಗ್ಗೆ ಕಾಂಗ್ರೆಸ್ ಪಕ್ಷದವರ ಬಳಿ ದಾಖಲೆ ಇದ್ದರೆ ಕಾನೂನು ಪ್ರಕಾರ ದೂರು ದಾಖಲಿಸಲಿ, ನ್ಯಾಯಾಲಯಕ್ಕೆ ಹೋಗಲಿ. ಅದಕ್ಕೆ ಈ ದೇಶದಲ್ಲಿ ಅವಕಾಶವಿದೆ ಎಂದು ಕೊಪ್ಪಳ-ಜಿಲ್ಲಾ ಉಸ್ತುವಾರಿ ಹಾಗು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ (Minister Halappa Achar) ಹೇಳಿದರು.
ಕುಷ್ಟಗಿಗೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು, ಇಲ್ಲಿನ ಸರ್ಕ್ಯೂಟ್ ಹೌಸ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್ನವರಿಗೆ ಮಾಡಲು ಬೇರೆ ಏನೂ ಕೆಲಸ ಇಲ್ಲ. ಹೀಗಾಗಿ ಬಿಟ್ ಕಾಯಿನ್ ಬಗ್ಗೆ ನಿರಾಧಾರ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
ಜಗದೀಶ್ ಶೆಟ್ಟರ್ ದೆಹಲಿಗೆ ಹೋಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ತಮ್ಮ ವೈಯಕ್ತಿಕ ಕೆಲಸದ ಹಿನ್ನೆಲೆಯಲ್ಲಿ ಹೋಗಿರುವುದಾಗಿ ಅವರೇ ಸ್ಪಷ್ಟಪಡಿಸಿದ್ದಾರೆ ಎಂದರು. ಬಸವರಾಜ ಬೊಮ್ಮಾಯಿ (CM Basavaraja Bommai) ಅವರು ಈ ರಾಜ್ಯದ ಸಿಎಂ. ಹಲವಾರು ಕೆಲಸದ ನಿಮಿತ್ತ ದೆಹಲಿಗೆ ಹೋಗುತ್ತಾರೆ.