ಗಂಗಾವತಿ(ಕೊಪ್ಪಳ):ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಇಂದು ಅಂಜನಾದ್ರಿ ದೇಗುಲಕ್ಕೆ ಭೇಟಿ ನೀಡಲಿದ್ದಾರೆ.
ಇಂದು ಅಂಜನಾದ್ರಿ ದೇಗುಲಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ ನೀಡಿ ತೆರಳಿದ ಬೆನ್ನಲ್ಲೇ, ಇಂದು ಬೆಳಗ್ಗೆ 9ಗಂಟೆಗೆ ಸಚಿವ ಕೆ ಎಸ್ ಈಶ್ವರಪ್ಪ ಅಂಜನಾದ್ರಿ ದೇಗುಲಕ್ಕೆ ಭೇಟಿ ನೀಡಲಿದ್ದಾರೆ. ಈ ಸಂಬಂಧ ದೇಗುಲದ ಆಡಳಿತ ಮಂಡಳಿ ಹಾಗೂ ಪಂಚಾಯತ್ ಇಲಾಖೆಯ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ.
ಈಶ್ವರಪ್ಪ ಭೇಟಿ ಬಳಿಕವೇ ಅವರು ಬೆಟ್ಟದ 578 ಮೆಟ್ಟಿಲುಗಳನ್ನು ಏರಿ ಪೂಜೆ ಸಲ್ಲಿಸುತ್ತಾರೋ ಅಥವಾ ಬೆಟ್ಟದ ತಳಭಾಗದಲ್ಲಿಯೇ ಪೂಜೆ ಸಲ್ಲಿಸುತ್ತಾರೆಯೇ ಎಂಬುವುದು ಗೊತ್ತಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಓದಿ:ಡಿಕೆಶಿ ಭೇಟಿ ಮಾಡಿದ ವಚನಾನಂದ ಶ್ರೀ : ಮೀಸಲಾತಿ ಪರ ದನಿ ಎತ್ತುವಂತೆ ಮನವಿ
ಈಗಾಗಲೇ ಬೆಟ್ಟದ ಕೆಳ ಭಾಗದಲ್ಲಿರುವ ಪಾರ್ಕಿಂಗ್ ಪ್ರದೇಶದಲ್ಲಿ ಪೆಂಡಾಲ್ ಹಾಕಿ, ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸುಮಾರು ಒಂದು ಸಾವಿರ ಜನರು ಸೇರುವ ನಿರೀಕ್ಷೆಯಿದೆ. ಪಂಚಾಯತ್‌ಗಳಿಗೆ ಆಯ್ಕೆಯಾದ ಬಿಜೆಪಿ ಬೆಂಬಲಿತರಿಗೆ ಇದೇ ಸಂದರ್ಭದಲ್ಲಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.