ಕರ್ನಾಟಕ

karnataka

ETV Bharat / state

ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಿ ಪ್ರೋತ್ಸಾಹಧನ ವಿತರಿಸಿದ ಸಚಿವ ಎಸ್.ಟಿ.‌ಸೋಮಶೇಖರ್​​

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಹಕಾರ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಜಿಲ್ಲೆಯ 10 ಮಂದಿ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಿ ಮೂರು ಸಾವಿರ ರೂಪಾಯಿಯ ಪ್ರೋತ್ಸಾಹಧನದ ಚೆಕ್​ ವಿತರಿಸಲಾಯಿತು.

minister-st-somashekhar
ಸಚಿವ ಎಸ್.ಟಿ.‌ಸೋಮಶೇಖರ್

By

Published : Jun 19, 2020, 9:48 PM IST

ಕೊಪ್ಪಳ: ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್​ನಲ್ಲಿ ಹಮ್ಮಿಕೊಂಡಿದ್ದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮವನ್ನು ಸಹಕಾರ ಇಲಾಖೆ ಸಚಿವ ಎಸ್.ಟಿ.‌ಸೋಮಶೇಖರ್ ಉದ್ಘಾಟಿಸಿದರು‌.

ಆಶಾ ಕಾರ್ಯಕರ್ತೆಯರಿಗೆ ಸನ್ಮಾನ: ಪ್ರೋತ್ಸಾಹಧನ ವಿತರಣೆ

ಕೊರೊನಾದಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆಶಾ ಕಾರ್ಯಕರ್ತೆಯರು ಕೊರೊನಾ ಸೋಂಕಿತರ ಪತ್ತೆಗೆ ಸಹಾಯ ಮಾಡುತ್ತಾ ಸಾಕಷ್ಟು ಶ್ರಮಿಸುತ್ತಿದ್ದಾರೆ. ಆಶಾ ಕಾರ್ಯಕರ್ತೆಯರ ಈ ಕೆಲಸ ಮೆಚ್ಚುವಂತಹದ್ದು. ಮನೆ‌ ಮನೆಗೆ ತೆರಳಿ ಮಾಹಿತಿ ಕಲೆಹಾಕಿ ಕೊರೊನಾ ಸೋಂಕಿತರ ಪತ್ತೆಗೆ ಸಹಾಯ ಮಾಡುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಪ್ರತಿಯೊಬ್ಬ ಆಶಾ ಕಾರ್ಯಕರ್ತೆಗೆ ಮೂರು ಸಾವಿರ ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತಿದೆ.‌ ಸಹಕಾರ ಇಲಾಖೆಯಡಿ ಬರುವ ವಿವಿಧ ಸಹಕಾರ ಸಂಸ್ಥೆ, ಒಕ್ಕೂಟಗಳ ಲಾಭಾಂಶದಲ್ಲಿ ಒಂದಿಷ್ಟು ಭಾಗವನ್ನು ಕ್ರೋಢೀಕರಿಸಿ ರಾಜ್ಯದ ಒಟ್ಟು 41500 ಆಶಾ ಕಾರ್ಯಕರ್ತೆಯರಿಗೆ ಸಹಕಾರ ಇಲಾಖೆಯಿಂದ ಒಟ್ಟು 12.75 ಕೋಟಿ ರೂಪಾಯಿಗಳನ್ನು ಪ್ರೋತ್ಸಾಹಧನವನ್ನಾಗಿ ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಎರಡು ನಿಮಿಷ ಮೌನಾಚರಣೆ ಮಾಡುವ ಮೂಲಕ ಗಾಲ್ವಾನ್​ ಕಣಿವೆಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ಸಂಸದ ಸಂಗಣ್ಣ ಕರಡಿ, ಶಾಸಕರಾದ ಪರಣ್ಣ ಮುನವಳ್ಳಿ, ಅಮರೇಗೌಡ ಪಾಟೀಲ್ ಭಯ್ಯಾಪುರ, ಹಾಲಪ್ಪ ಆಚಾರ್, ಕೆ.ರಾಘವೇಂದ್ರ ಹಿಟ್ನಾಳ್, ಬಸವರಾಜ ದಡೇಸಗೂರು, ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಮತ್ತಿತರರು ಉಪಸ್ಥಿರಿದ್ದರು.

ABOUT THE AUTHOR

...view details