ಕೊಪ್ಪಳ: ಕೊರೊನಾ ಸೋಂಕಿನ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಅಧಿಕಾರಿಗಳಿಗೆ ಸೂಚಿಸಿದರು.
ಕೊಪ್ಪಳ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಚಿವ ಶ್ರೀರಾಮುಲು - corona awareness in koppal
ಕೊಪ್ಪಳದ ಜಿಲ್ಲಾಸ್ಪತ್ರೆಗೆ ಸಚಿವ ಶ್ರೀರಾಮುಲು ಭೇಟಿ ನೀಡಿದ್ದು, ಕೊರೊನಾ ಸೋಂಕಿನ ತಡೆಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
![ಕೊಪ್ಪಳ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಚಿವ ಶ್ರೀರಾಮುಲು minister visit to district hospital](https://etvbharatimages.akamaized.net/etvbharat/prod-images/768-512-6612287-514-6612287-1585666928180.jpg)
ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಚಿವ ಶ್ರೀರಾಮುಲು
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಭೆಯಲ್ಲಿ ಪಾಲ್ಗೊಂಡಿದ್ದ ಶಾಸಕರು ಹಾಗೂ ಸಂಸದರಿಂದ ಸಲಹೆ ಸೂಚನೆ ಪಡೆದುಕೊಂಡರು.
ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಿದರು. ಸೋಂಕು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.