ಕೊಪ್ಪಳ: ಜಿಲ್ಲೆಯಲ್ಲಿ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯನ್ನಾಗಿಸಿದ ಅಪ್ರಾಪ್ತ ಬಾಲಕನ ವಿರುದ್ಧ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.
ಕೊಪ್ಪಳ: ಬಾಲಕಿಯನ್ನು ಗರ್ಭಿಣಿಯಾಗಿಸಿದ ಬಾಲಕ!! - ಮಗುವಿಗೆ ಜನ್ಮ ನೀಡಿದ ಕೊಪ್ಪಳ ಬಾಲಕಿ
ಬಾಲಕಿ ಮಗುವಿಗೆ ಜನ್ಮ ನೀಡಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಮಗುವಿಗೆ ಜನ್ಮ ನೀಡಿರುವ ಅಪ್ರಾಪ್ತ ಬಾಲಕಿ
ಜಿಲ್ಲೆಯ ಯಲಬುರ್ಗಾ ತಾಲೂಕಿನ ಗ್ರಾಮವೊಂದರ 16 ವರ್ಷದ ಬಾಲಕಿ ಮತ್ತು ಅದೇ ಗ್ರಾಮದ ಅಪ್ರಾಪ್ತ ಬಾಲಕನ ನಡುವೆ ಪ್ರೇಮಾಂಕುರವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾರೆ. ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದು, ಇತ್ತೀಚಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಹಿನ್ನೆಲೆಯಲ್ಲಿ ಬಾಲಕಿಯ ಪಾಲಕರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಅಪ್ರಾಪ್ತ ಬಾಲಕನ ವಿರುದ್ಧ ಬೇವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Last Updated : Nov 1, 2020, 10:56 PM IST