ಗಂಗಾವತಿ: ಇಲ್ಲಿನ ತಾಲ್ಲೂಕು ಪಂಚಾಯಿತಿಗೆ ಗುರುವಾರ ನಡೆಯಲಿರುವ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಯಾರು ಆಯ್ಕೆಯಾಗಲಿದ್ದಾರೆ ಎಂದು ಕಾದು ನೋಡಿ ಎಂದು ಶಾಸಕ ಪರಣ್ಣ ಮುನವಳ್ಳಿ ಕಾಂಗ್ರೆಸ್ ಮುಖಂಡರಿಗೆ ಶಾಕ್ ನೀಡಿದ್ದಾರೆ.
ತಾಲ್ಲೂಕು ಪಂಚಾಯಿತಿಗೆ ಅಧ್ಯಕ್ಷ ಯಾರಾಗ್ತಾರೆ ಕಾದು ನೋಡಿ: ಶಾಸಕ ಪರಣ್ಣ ಮುನವಳ್ಳಿ
ತಾಲ್ಲೂಕು ಪಂಚಾಯಿತಿಯಲ್ಲಿ ಅಧಿಕಾರ ಹಿಡಿಯಲು ನಮಗೆ ಸ್ಪಷ್ಟ ಬಹುಮತವಿಲ್ಲ. ಆದರೂ ನಾಳೆ ನಮ್ಮ ಪಕ್ಷದ ಸದಸ್ಯರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಶಾಸಕ ಪರಣ್ಣ ಮುನವಳ್ಳಿ ಸ್ಪಷ್ಟಪಡಿಸಿದ್ದಾರೆ.
ಶಾಸಕ ಪರಣ್ಣ ಮುನವಳ್ಳಿ
ತಾಲ್ಲೂಕು ಪಂಚಾಯಿತಿಯಲ್ಲಿ ಅಧಿಕಾರ ಹಿಡಿಯಲು ನಮಗೆ ಸ್ಪಷ್ಟ ಬಹುಮತವಿಲ್ಲ. ಆದರೂ ನಾಳೆ ನಮ್ಮ ಪಕ್ಷದ ಸದಸ್ಯರು ನಾಮಪತ್ರ ಸಲ್ಲಿಸಲಿದ್ದಾರೆ. ಕದನ ಕಣದಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಶಾಸಕರು ಸ್ಪಷ್ಟಪಡಿಸಿದರು.
ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ ಕೆಲ ಕಾಂಗ್ರೆಸ್ ಸದಸ್ಯರು ಬೆಂಬಲ ನೀಡಲು ಸಿದ್ಧವಿದ್ದು, ಈಗಾಗಲೆ ನನ್ನ ಹಾಗೂ ನಮ್ಮ ಪಕ್ಷದ ಪ್ರಮುಖರ ಜೊತೆ ಮಾತನಾಡಿದ್ದಾರೆ. ಹೀಗಾಗಿ ನಾಳೆ ಏನಾಗಲಿದೆ ಎಂಬುವುದನ್ನು ಕಾದು ನೋಡಿ ಎಂದರು.