ಗಂಗಾವತಿ (ಕೊಪ್ಪಳ):ಕನಕಗಿರಿ ವಿಧಾನಸಭಾ ಕ್ಷೇತ್ರದ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಹಾಗೂ ಕಾರಟಗಿಯ ಜೆಸ್ಕಾಂ ಇಲಾಖೆಯ ಮುಂದೆ ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಸವರಾಜ ದಢೇಸೂಗೂರು ಇಂದು ನ್ಯಾಯಾಲಯಕ್ಕೆ ಹಾಜರಾದರು.
ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣ: ಕೋರ್ಟ್ಗೆ ಹಾಜರಾದ ಕನಕಗಿರಿ ಶಾಸಕ - Yallalinga murder case
ಕನಕಗಿರಿ ವಿಧಾನಸಭಾ ಕ್ಷೇತ್ರದ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಹಾಗೂ ಕಾರಟಗಿಯ ಜೆಸ್ಕಾಂ ಇಲಾಖೆಯ ಮುಂದೆ ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಸವರಾಜ ದಢೇಸೂಗೂರು ಇಂದು ನ್ಯಾಯಾಲಯಕ್ಕೆ ಹಾಜರಾದರು.
ಯಲ್ಲಾಲಿಂಗನ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ನಡೆದ ಪಾದಯಾತ್ರೆಯ ಪ್ರತಿಭಟನೆ ಸಂದರ್ಭದಲ್ಲಿ ಒಂಭತ್ತು ಹಾಗೂ ಕಾರಟಗಿ ಕೆಇಬಿ ಮುಂದೆ ನಡೆದ ರೈತರ ಪರವಾದ ಪ್ರತಿಭಟನೆ ಪ್ರಕರಣದಲ್ಲಿ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಎರಡು ಪ್ರಕರಣದಲ್ಲೂ ಶಾಸಕ ಬಸವರಾಜ ದಢೇಸೂಗೂರು ವಿರುದ್ಧ ಆರೋಪ ಕೇಳಿಬಂದಿತ್ತು.
ಈ ಕುರಿತು ಪ್ರತಿಕ್ರಿಯೆ ನೀಡಿದ ಶಾಸಕ, ಮಾಜಿ ಸಚಿವ ಶಿವರಾಜ ತಂಗಡಗಿ ತಮ್ಮ ಅಧಿಕಾರದ ಸಂದರ್ಭದಲ್ಲಿ ಕೊಲೆ ಪ್ರಕರಣದಲ್ಲಿ ಪಾದಯಾತ್ರೆ ಕೈಗೊಂಡಿದ್ದಕ್ಕೆ ಹಾಗೂ ರೈತರ ಪರವಾಗಿ ಜೆಸ್ಕಾಂ ಮುಂದೆ ಪ್ರತಿಭಟನೆ ನಡೆಸಿದ್ದಕ್ಕೆ ಸುಳ್ಳು ಕೇಸ್ ಹಾಕಿಸಿದ್ದರು. ಶೀಘ್ರ ವಿಚಾರಣೆ ಮುಗಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.