ಕೊಪ್ಪಳ:ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ಕೊಪ್ಪಳದ ಕುವೆಂಪು ನಗರಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಹಾಗೂ ತಹಸೀಲ್ದಾರ್ ಜೆ.ಬಿ. ಮಜ್ಜಗಿ ಹಾಗೂ ನಗರಸಭೆ ಅಧಿಕಾರಿಗಳು ಭೇಟಿ ನೀಡಿದರು.
ಕೊಪ್ಪಳ: ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಶಾಸಕ ಹಿಟ್ನಾಳ್ ಭೇಟಿ - ಕೊಪ್ಪಳದಲ್ಲಿ ನಿನ್ನೆ ಸುರಿದ ಭೀಕರ ಮಳೆ
ಕೊಪ್ಪಳದಲ್ಲಿ ನಿನ್ನೆ ಸುರಿದ ಭೀಕರ ಮಳೆಯಿಂದಾಗಿ ಕುವೆಂಪು ನಗರದ ಕೆಲ ಮನೆಗಳಿಗೆ ನೀರು ನುಗ್ಗಿದ್ದು, ಇಂದು ಶಾಸಕ ರಾಘವೇಂದ್ರ ಹಿಟ್ನಾಳ್ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
![ಕೊಪ್ಪಳ: ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಶಾಸಕ ಹಿಟ್ನಾಳ್ ಭೇಟಿ](https://etvbharatimages.akamaized.net/etvbharat/prod-images/768-512-4560142-thumbnail-3x2-vicky.jpg)
ಗವಿಮಠದ ಹಿಂಭಾಗದಲ್ಲಿರುವ ಕುವೆಂಪು ನಗರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನೀರು ನುಗ್ಗಿದ ಪರಿಣಾಮ ದವಸ ಧಾನ್ಯಗಳು ಹಾಗೂ ಪುಸ್ತಕಗಳು ಸೇರಿದಂತೆ ವಸ್ತುಗಳು ಹಾನಿಗೊಳಗಾಗಿವೆ ಎಂದು ಶಾಸಕರ ಎದುರು ಜನರು ಅಳಲು ತೋಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ನಗರದ ಎರಡು ವಾರ್ಡ್ ಗಳಲ್ಲಿ ಮಳೆಯಿಂದು ಸುಮಾರು 17 ಕುಟುಂಬಗಳಿಗೆ ತೊಂದರೆಯಾಗಿದೆ. ಮನೆಯಲ್ಲಿದ್ದ ಆಹಾರ ಸಾಮಾಗ್ರಿ ಹಾಗೂ ಇತರೆ ವಸ್ತುಗಳು ಹಾನಿಗೊಳಗಾಗಿವೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುವಂತೆ ಈಗಾಗಲೇ ತಹಸೀಲ್ದಾರರಿಗೆ ಸೂಚಿಸಲಾಗಿದೆ. ಶೀಘ್ರವೇ ಅವರಿಗೆ ನಿಯಮಾನುಸಾರವಾಗಿ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.