ಕೊಪ್ಪಳ: ರೈತರು ಮತ್ತು ಹೋರಾಟಗಾರರನ್ನು ಹತ್ತಿಕ್ಕುವ ಕೆಲಸವನ್ನು ಸಿಎಂ ಯಡಿಯೂರಪ್ಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ಆರೋಪಿಸಿದ್ದಾರೆ.
ಸಿಎಂ ರೈತರು ಮತ್ತು ಹೋರಾಟಗಾರರನ್ನು ಹತ್ತಿಕ್ಕುತ್ತಿದ್ದಾರೆ.. ಶಾಸಕ ಕೆ ರಾಘವೇಂದ್ರ ಹಿಟ್ನಾಳ್ - MLA K Raghavendra Hitnal accused of CM koppal
ರೈತರು ಮತ್ತು ಹೋರಾಟಗಾರರನ್ನು ಹತ್ತಿಕ್ಕುವ ಕೆಲಸವನ್ನು ಸಿಎಂ ಯಡಿಯೂರಪ್ಪ ಮಾಡುತ್ತಿದ್ದಾರೆ ಎಂದು ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ಆರೋಪಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದ ಈದ್ಗಾ ಮೈದಾನದಲ್ಲಿ ನಡೆದ ಪ್ರತಿಭಟನೆ ಬಳಿಕ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ಆರ್ಸಿ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ನಡೆಸಿದ ಗೋಲಿಬಾರ್ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸೇರಿ ಅನೇಕ ನಾಯಕರನ್ನು ಪೊಲೀಸರು ತಡೆದಿದ್ದಾರೆ.ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗುವಂತಹ ವ್ಯವಸ್ಥೆ ಎಂದು ಆರೋಪಿಸಿದರು.
ಪೌರತ್ವ ತಿದ್ದುಪಡಿ ಕಾಯ್ದೆ ತರುವ ಮೊದಲು ಕೇಂದ್ರ ಸರ್ಕಾರ ಸಂಸತ್ನಲ್ಲಿ ಚರ್ಚೆ ಮಾಡಬೇಕಿತ್ತು. ಪಾರ್ಲಿಮೆಂಟ್ನಲ್ಲಿ ಚರ್ಚೆ ಮಾಡದೆ ಏಕಾಏಕಿ ಕಾಯ್ದೆ ಜಾರಿ ಮಾಡಿದರೆ ಅಶಾಂತಿಗೆ ಕಾರಣವಾಗುತ್ತದೆ. ಪೌರತ್ವ ತಿದ್ದುಪಡಿ ಕಾಯ್ದೆ ಇದು ಜನ ವಿರೋಧಿ ಕಾಯ್ದೆ ಎಂದು ಶಾಸಕ ಕೆ.ರಾಘವೇಂದ್ರ ಕಿಡಿಕಾರಿದರು.