ಕರ್ನಾಟಕ

karnataka

ETV Bharat / state

ಸಿದ್ದರಾಮಯ್ಯರನ್ನು ಮೂಲೆಗುಂಪು ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಶಾಸಕ ಹಿಟ್ನಾಳ್ - ಕೊಪ್ಪಳ ಜಿಲ್ಲಾ ಸುದ್ದಿ

ಅನರ್ಹರ ಶಾಸಕರಿಗೆ ದಿಕ್ಕು ತೋಚದಂತ ಪರಿಸ್ಥಿತಿ ಇದೆ. ಮುಂದಿನ ದಿನಗಳಲ್ಲಿ ಜನ ಕಾಂಗ್ರೆಸ್​ಗೆ ಆಶೀರ್ವಾದ ಮಾಡ್ತಾರೆ. ಸಿದ್ದರಾಮಯ್ಯರನ್ನು ಮೂಲೆಗುಂಪು ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಅವರೊಬ್ಬ ಮಾಸ್​​ ಲೀಡರ್ ಎಂದು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್​ ಹೇಳಿದ್ದಾರೆ.

ಶಾಸಕ ಕೆ. ರಾಘವೇಂದ್ರ ಹಿಟ್ನಾಳ್

By

Published : Sep 29, 2019, 6:17 PM IST

ಕೊಪ್ಪಳ:ಸಿದ್ದರಾಮಯ್ಯ ಅವರು ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಸಿಎಂ ಆಗ್ತಾರೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಭವಿಷ್ಯ ನುಡಿದಿದ್ದಾರೆ.

ತಾಲೂಕಿನ ತಿಗರಿ ಗ್ರಾಮದಲ್ಲಿ ಮಾತನಾಡಿದ ಅವರು, ಸದ್ಯದ ರಾಜಕೀಯ ವಾತಾವರಣ ನೋಡಿದ್ರೆ ಸಿದ್ದರಾಮಯ್ಯ ಅವರು ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಸಿಎಂ ಆಗ್ತಾರೆ ಅನಿಸುತ್ತಿದೆ. ರಾಜ್ಯದ ಜನ ಸಮ್ಮಿಶ್ರ ಸರ್ಕಾರವನ್ನು ನೋಡಿದ್ದಾರೆ. ಈಗ ಬಿಜೆಪಿ ಸರ್ಕಾರವನ್ನು ನೋಡುತ್ತಿದ್ದಾರೆ. ಬಿಜೆಪಿ ಸರ್ಕಾರ ಪ್ರವಾಹ ಸಂತ್ರಸ್ತರಿಗೆ ನೆರವಾಗಿಲ್ಲ. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ ಎಂದರು.

ಶಾಸಕ ಕೆ. ರಾಘವೇಂದ್ರ ಹಿಟ್ನಾಳ್

ಸರ್ಕಾರದ ಕಾರ್ಯವೈಖರಿ ಬಗ್ಗೆ ಜನರು ಬೇಸತ್ತಿದ್ದಾರೆ.ಇನ್ನು, ಅನರ್ಹ ಶಾಸಕರಿಗೆ ದಿಕ್ಕು ತೋಚದಂತಾಗಿದೆ. ಹೀಗಾಗಿ ಮುಂದಿನ ದಿನದಲ್ಲಿ ಜನ ಕಾಂಗ್ರೆಸ್​ಗೆ ಆಶೀರ್ವಾದ ಮಾಡ್ತಾರೆ. ಸಿದ್ದರಾಮಯ್ಯರನ್ನು ಮೂಲೆಗುಂಪು ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಅವರೊಬ್ಬ ಮಾಸ್​​ ಲೀಡರ್ ಎಂದು ಇದೇ ಸಂದರ್ಭದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್​ ಹೇಳಿದ್ರು.

ABOUT THE AUTHOR

...view details