ಗಂಗಾವತಿ: ನಗರದ ರಸ್ತೆಯಲ್ಲಿ ಯುವಕನೊಬ್ಬ ಬೈಕ್ನಿಂದ ಸ್ಕಿಡ್ ಆಗಿ ಬಿದ್ದು ತೀವ್ರವಾಗಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದ. ಈ ವೇಳೆ ಅದೇ ಮಾರ್ಗದಲ್ಲಿ ಹೊರಟಿದ್ದ ಶಾಸಕ ಪರಣ್ಣ ಮುನವಳ್ಳಿ ಅವರು ತಮ್ಮ ಕಾರಿನಲ್ಲಿ ಗಾಯಾಳು ಯುವಕನನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.
ಬೈಕ್ನಿಂದ ಬಿದ್ದು ಯುವಕನಿಗೆ ತೀವ್ರ ಗಾಯ: ತಮ್ಮ ವಾಹನದಲ್ಲೇ ಆಸ್ಪತ್ರೆಗೆ ರವಾನಿಸಿದ ಶಾಸಕ ಮುನವಳ್ಳಿ - ಬೈಕ್ನಿಂದ ಬಿದ್ದು ಗಾಯಗೊಂಡಿದ್ದ ಯುವಕನ ರಕ್ಷಣೆ ಮಾಡಿದ ಶಾಸಕ ಮುನವಳ್ಳಿ
ಅಪಘಾತದಲ್ಲಿ ಗಾಯಗೊಂಡ ಯುವಕನನ್ನು ಶಾಸಕ ಪರಣ್ಣ ಮುನವಳ್ಳಿ ಅವರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.
ಗಾಯಾಳು ಯುವಕನನ್ನು ಬಸವರಾಜ ಮರುಕುಂಬಿ (33) ಎಂದು ಗುರುತಿಸಲಾಗಿದೆ. ಬೈಕ್ನಲ್ಲಿ ಗಂಗಾವತಿಗೆ ಬರುವ ಸಂದರ್ಭದಲ್ಲಿ ಯುವಕ ಜಾರಿ ಬಿದ್ದು ತೀವ್ರ ಗಾಯಗೊಂಡಿದ್ದಾನೆ. ಇದೇ ಮಾರ್ಗದಲ್ಲಿ ಬರುತ್ತಿದ್ದ ಶಾಸಕ ಪರಣ್ಣ ಮುನವಳ್ಳಿ ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ತಮ್ಮ ವಾಹನದಲ್ಲಿ ಯುವಕನನ್ನು ಚಿಕಿತ್ಸೆಗಾಗಿ ಗಂಗಾವತಿ ಉಪವಿಭಾಗ ಆಸ್ಪತ್ರೆಗೆ ತಮ್ಮ ವಾಹನದಲ್ಲೇ ರವಾನಿಸಿದರು. ತೀವ್ರ ಗಾಯಗೊಂಡ ಯುವಕನಿಗೆ ಉಪವಿಭಾಗ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಟ್ಟು, ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ಓದಿ:ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಹಾನಿ: ಸಿಎಂ ಭೇಟಿ