ಗಂಗಾವತಿ:ಜಿಲ್ಲೆಯಲ್ಲಿ ಅದರಲ್ಲೂ ಗಂಗಾವತಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆ ಒಂದು ವಾರ ಕಾಲ ಜಿಲ್ಲೆಯಲ್ಲಿ ಲಾಕ್ಡೌನ್ ನಿರ್ಧಾರ ತಾಳಬೇಕು ಎಂದು ಶಾಸಕ ಪರಣ್ಣ ಮುನವಳ್ಳಿ ಜಿಲ್ಲಾಧಿಕಾರಿಗೆ ಮನವಿ ಮಾಡಿದರು.
ಕೊಪ್ಪಳ ಜಿಲ್ಲೆ ಒಂದು ವಾರ ಲಾಕ್ಡೌನ್ ಮಾಡಿ: ಶಾಸಕರ ಮನವಿ
ಕೊಪ್ಪಳದಲ್ಲಿ ತಾಲೂಕುಗಳ ಅಭಿಪ್ರಾಯ ಪಡೆದು, ಜಿಲ್ಲೆಯಲ್ಲಿ ಒಂದು ವಾರ ಕಾಲ ಲಾಕ್ಡೌನ್ ಮಾಡಬೇಕು ಎಂದು ಶಾಸಕ ಪರಣ್ಣ ಮುನವಳ್ಳಿ ಜಿಲ್ಲಾಧಿಕಾರಿಗೆ ಮನವಿ ಮಾಡಿದರು.
ಕೊವಿಡ್-19 ಅಂಗವಾಗಿ ನಡೆದ ಮುಂಜಾಗ್ರತಾ ಸಭೆ
ಕೋವಿಡ್-19 ಮುಂಜಾಗ್ರತಾ ಸಭೆಯಲ್ಲಿ ಪಾಲ್ಗೊಂಡಿದ್ದ ಶಾಸಕರು, ಈ ಹಿಂದೆ ಲಾಕ್ಡೌನ್ ಇದ್ದಾಗ ಜಿಲ್ಲೆಯಲ್ಲಿ ಒಂದೂ ಪ್ರಕರಣ ಪತ್ತೆಯಾಗಿರಲಿಲ್ಲ. ಇಡೀ ಜಿಲ್ಲೆ ಗ್ರೀನ್ ಝೋನ್ ಪಟ್ಟಿಯಲ್ಲಿತ್ತು. ಲಾಕ್ಡೌನ್ ತೆರವುಗೊಳಿಸಿದ ನಂತರ, ಹೊರರಾಜ್ಯ ಹಾಗೂ ಜಿಲ್ಲೆಗಳಿಂದ ಬಂದ ಜನರಿಂದ ಕೊರೊನಾ ಆರಂಭವಾಗಿದೆ ಎಂದು ಹೇಳಿದರು.
ಈಗಾಗಲೇ ಜಿಲ್ಲೆಯ ತಾಲೂಕುಗಳಲ್ಲಿ ಅರ್ಧದಿನ ಲಾಕ್ಡೌನ್ಗೆ ವರ್ತಕರು, ಜನತೆ ಸ್ವಯಂ ಪ್ರೇರಣೆಯಿಂದ ಒಲವು ತೋರಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಮಾಡಬೇಕು ಎಂದರು.