ಗಂಗಾವತಿ(ಕೊಪ್ಪಳ):ನಾನು ಬಿಜೆಪಿಯ ಹಾಲಿ ಶಾಸಕನಾಗಿದ್ದು 2023ರ ವಿಧಾನಸಭಾ ಚುನಾವಣೆಗೆ ಗಂಗಾವತಿ ಕ್ಷೇತ್ರದಿಂದ ಕಣಕ್ಕಿಳಿಯುವುದು ನಿಶ್ಚಿತ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ರೆಡ್ಡಿಯವರು ಯಾವ ಕಾರಣಕ್ಕೆ ತಮ್ಮ ನೆಲೆಯನ್ನು ಗಂಗಾವತಿಗೆ ಬದಲಿಸಿದ್ದಾರೋ ಗೊತ್ತಿಲ್ಲ ಎಂದರು.
ನಾನು ಪಕ್ಷದ ನಿರ್ಧಾರಕ್ಕೆ ಬದ್ಧ, ಶಿಸ್ತಿನ ಕಾರ್ಯಕರ್ತ. ಗಂಗಾವತಿಯಿಂದ ಯಾರನ್ನು ಕಣಕ್ಕಿಳಿಸಬೇಕು ಎಂಬುವುದರ ಬಗ್ಗೆ ಪಕ್ಷ ನಿರ್ಣಯ ಕೈಗೊಳ್ಳುತ್ತದೆ. ನಾನು ಈಗಾಗಲೇ ಎರಡು ಬಾರಿ ಶಾಸಕನಾಗಿದ್ದೇನೆ. ಈ ಬಾರಿಯೂ ನಾನೇ ಸ್ಪರ್ಧಿಸಲಿದ್ದೇನೆ. ಈ ಬಗ್ಗೆ ಯಾರಿಗೂ ಗೊಂದಲ ಬೇಡ ಎಂದು ಹೇಳಿದರು.